
ಮೂಡುಬಿದಿರೆ ಮಹಿಳಾ ಬಂಟರ ಘಟಕ ಇದರ ವತಿಯಿಂದ ಮಾರ್ಚ್ 29ರಂದು ಇಲ್ಲಿನ ಹೋಟೆಲ್ ಪಂಚರತ್ನ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಕಳದ ಎಸ್. ವಿ.ಟಿ ಮಹಿಳಾ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ ಯವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಸಾಮಾಜಿಕ ಜೀವನದಲ್ಲಿ ಮಹಿಳೆಯರ ಪಾತ್ರದ ಕುರಿತು ಮಾತನಾಡುತ್ತಾ ಕುಟುಂಬ ವ್ಯವಸ್ಥೆ ಹಾಗೂ ಸಾಮಾಜಿಕ ಜೀವನದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ವಿವರಿಸಿದರು.
ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಶೋಭಾ ಎಸ್. ಹೆಗ್ಡೆ ಸ್ವಾಗತಿಸಿದರು ಕೋಶಾಧಿಕಾರಿ ಗೀತಾ ಪಿ ಶೆಟ್ಟಿ ಹಾಗೂ ಕಾರ್ಯದರ್ಶಿ ಸಂಗೀತಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಯಲಕ್ಷ್ಮಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಮಹಿಳೆಯರಿಗಾಗಿ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
