ಕಾರ್ಕಳಹೆಬ್ರಿ

ಮುದ್ರಾಡಿ ಗ್ರಾಮ ಪಂಚಾಯತ್‌ಗೆ 1 ಕೋಟಿ ರೂ. ನಗದು ಬಹುಮಾನ

ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವಾಲಯವು ಉತ್ತಮವಾಗಿ ಕಾರ್ಯನಿರ್ವಹಿಸುವ ಪಂಚಾಯತ್‌ಗಳಿಗೆ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಉಡುಪಿ ಜಿಲ್ಲೆಯ 5 ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗೆ ಭಾಜನವಾಗಿದೆ.


ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮ ಪಂಚಾಯತ್, ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಮ ಪಂಚಾಯತ್, ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ ಹಾಗೂ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ಪ್ರಶಸ್ತಿಗೆ ಆಯ್ಕೆಯಾಗಿವೆ.

ಮುದ್ರಾಡಿ ಗ್ರಾಮ ಪಂಚಾಯತ್ ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ಪಂಚಾಯತ್ ವಿಷಯದಲ್ಲಿ ಪ್ರಥಮ ಸ್ಥಾನ ಪಡೆದು 1 ಕೋಟಿ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿಯನ್ನು ಪಡೆಯಲಿದೆ.

ಪಂಚಾಯತ್‌ಗಳಿಗೆ ಪ್ರಶಸ್ತಿಯನ್ನು ರಾಷ್ಟ್ರಪತಿಯವರು ಪ್ರದಾನ ಮಾಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಯು.ಸಿ.ಇ.ಇ.ಡಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ 518ನೇ ರ್‍ಯಾಂಕ್

Madhyama Bimba

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಮೋಸ್ಟ್ ಪ್ರಾಮಿಸಿಂಗ್ ಆಂಡ್ ಟ್ರಸ್ಟೆಡ್ ಪದವಿಪೂರ್ವ ಕಾಲೇಜು- 2024 ಪ್ರಶಸ್ತಿಯ ಗರಿ

Madhyama Bimba

ಹೆಬ್ರಿ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ-ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More