ಕಾರ್ಕಳ

ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ ಸಮಾರಂಭ

ಕರ್ನಾಟಕದ ಸುಂದರ ಕರಾವಳಿ ಪ್ರದೇಶವಾದ ಕಾರ್ಕಳವು ಸಾಂಸ್ಕೃತಿಕ ವೈಭವ, ಪ್ರಕೃತಿ ಸೌಂದರ್ಯ ಮತ್ತು ಶಾಂತ ವಾತಾವರಣಕ್ಕೆ ಪ್ರಸಿದ್ಧಿ. ಇದೇ ಊರಲ್ಲಿ ರಹಸ್ಯ ಸಂಚು ಮತ್ತು ಸತ್ಯದ ಹುಡುಕಾಟದಿಂದ ತುಂಬಿರುವ ಒಂದು ವಿಭಿನ್ನ ಕಥೆ ಮೂಡಿಬರುತ್ತದೆ ಅದೇ ‘ಡಿಟೆಕ್ಟಿವ್ ದಿವಾಕರ್’.


ಈ ತುಳು ಚಲನಚಿತ್ರದ ಟೀಸರ್ ಲಾಂಚ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ನೆರವೇರಿತು.

ಕಾರ್ಯಕ್ರಮ ಅತಿಥಿಗಳಿಂದ ಜ್ಯೋತಿ ಬೆಳಗುವುದರ ಮುಖೇನ ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅತಿಥಿಗಳಲ್ಲಿ ಓರ್ವರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿಯವರು “ನಮ್ಮ ನೆಲದ ಕಥೆಯನ್ನು ಹೇಳುವ ಈ ಚಲನಚಿತ್ರವು ಮುಂದಿನ ತಲೆಮಾರಿಗೆ ಒಂದು ಉತ್ತಮ ಸಂದೇಶವನ್ನು ನೀಡಲಿದೆ “ಎಂದು ತಿಳಿಸುತ್ತಾ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಚಲನಚಿತ್ರದ ಸಹ ನಿರ್ಮಾಪಕರಾದ ವಿಭಾ ಪ್ರೊಡಕ್ಷನ್‌ನ ಅಶ್ವತ್ ಎಸ್.ಎಲ್ .ರವರು “ಈ ಚಲನಚಿತ್ರವು ಒಂದು ಹೊಸ ಕಥಾಹಂದರವನಿಟ್ಟುಕೊಂಡು ನಿರ್ಮಾಣವಾಗಿದ್ದು ಕಾರ್ಕಳದ ಗತಿಸಿ ಹೋದ ಘಟನೆಗಳನ್ನು ಮತ್ತೆ ನೆನಪಿಸುವ, ರಹಸ್ಯಗಳನ್ನು ಅನಾವರಣಗೊಳಿಸುವ ಈ ಕಥೆ ಪ್ರೇಕ್ಷಕರಿಗೆ ಥ್ರಿಲ್ಲಿಂಗ್ ಅನುಭವ ನೀಡಲಿದೆ”. ಎಂದು ತಿಳಿಸುತ್ತಾ ಶುಭ ಹಾರೈಸಿದರು.

ವೇದಿಕೆಯಲ್ಲಿ ರವೀಂದ್ರ ಶೆಟ್ಟಿ ಬಜಗೋಳಿ, ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್ ಎಸ್ .ಎಲ್., ಅಮೃತ್ ಯು .ರೈ ಎನ್.ಪಿ . ಮೀಡಿಯಾದ ಮುಖ್ಯಸ್ಥರಾದ ವಾಸುದೇವ ಭಟ್, ಸಂದೀಪ್ ಎನ್, ಅವಿನಾಶ್ ಶೆಟ್ಟಿ (ಅಮ್ಮ ಚಾರಿಟೇಬಲ್ ಟ್ರಸ್ಟ್), ರಮಾನಂದ (ನಿರ್ದೇಶಕರು) ಡಾಕ್ಟರ್ ಸಂತೋಷ್ ಕುಮಾರ್ ಶೆಟ್ಟಿ, ಸುನೀಲ್ ಕಡ್ತಲ, ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲೋಹಿತ್ ನಡೆಸಿಕೊಟ್ಟರು.

Related posts

ಕಾರ್ಕಳ: ಬೈಕ್‌ನಿಂದ ಬಿದ್ದು ಹಿಂಬದಿ ಸವಾರೆ ಮೃತ್ಯು

Madhyama Bimba

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೋಳ ಆಯುಷ್ ಎಸ್. ಪೂಜಾರಿಗೆ ಚಿನ್ನದ ಪದಕ

Madhyama Bimba

ಕರ್ನಾಟಕದ ವಿಧಾನ ಮಂಡಲ ಸಂಸದೀಯ ಇತಿಹಾಸ ಹಾಗೂ ಸಂಪ್ರದಾಯ ಭಗ್ನ: ಸುನೀಲ್ ಕುಮಾರ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More