ಕಾರ್ಕಳ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಸಂಯೋಜಕರಾಗಿ ಸುಧಾಕರ್ ಪೂಜಾರಿ ಆಯ್ಕೆ

ಕಾರ್ಕಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ವ್ಯವಹಾರ ವಿಭಾಗದ ರಾಷ್ಟ್ರೀಯ ಸಂಯೋಜಕರಾಗಿ ಕಾರ್ಕಳದ ಸುಧಾಕರ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ನೇಮಕಾತಿಯನ್ನು ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ವಾಸುದೇವನ್ ಅವರು ಮಾಡಿದ್ದಾರೆ.

ಸುಧಾಕರ್ ಪೂಜಾರಿ ಅವರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕಾರ್ಕಳ ರಾಕ್ ಸಿಟಿಯ ಸ್ಥಾಪಕ ಅಧ್ಯಕ್ಷರಾಗಿದ್ದು, ಜೇಸಿ ಸಂಸ್ಥೆಯ ಪೂರ್ವ ವಲಯ ಅಧಿಕಾರಿ ಹಾಗೂ ರಾಷ್ಟ್ರೀಯ ತರಬೇತುದಾರರಾಗಿದ್ದಾರೆ.

ಅವರು ಕಳೆದ 22 ವರ್ಷಗಳಿಂದ ಜೇಸಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಎಕ್ಕಾರ ಲೈಫ್ ಸೆನ್ಸ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕರಾಗಿ ಹಾಗೂ ಸ್ವರ್ಣ ಗ್ರಾಮೀಣ ಸೌಹಾರ್ದ ಸಹಕಾರಿ ಸಂಘ (ಜೋಡುಕಟ್ಟೆ, ಕಾರ್ಕಳ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯುವ ವಾಹಿನಿ ಕಾರ್ಕಳ ಘಟಕದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ರಾಷ್ಟ್ರೀಯ ತರಬೇತುದಾರರಾಗಿರುವ ಅವರು ದೇಶದ ವಿವಿಧ ಭಾಗಗಳಲ್ಲಿ ಸಾವಿರಕ್ಕೂ ಹೆಚ್ಚು ತರಬೇತಿಗಳನ್ನು ನೀಡಿದ್ದು, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತರಬೇತುದಾರರಿಗಾಗಿ ವಿಶೇಷ ಪಠ್ಯವನ್ನು ತಯಾರಿಸಿ ತರಬೇತಿ ನೀಡಿರುವುದು ವಿಶೇಷವಾಗಿದೆ.
ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಅವರನ್ನು ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ ಮಾಡಲಾಗಿದೆ.

Related posts

ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಯಂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞ ವೈದ್ಯರ ನೇಮಕಾತಿಗೆ ಕಾರ್ಕಳ ಮಹಿಳಾ ಮೋರ್ಚಾ ಆಗ್ರಹ

Madhyama Bimba

ಕಾರ್ಕಳ: ಕಾರಿಗೆ ಮೋಟಾರ್ ಸೈಕಲ್ ಡಿಕ್ಕಿ- ಗಾಯ

Madhyama Bimba

ಬೈಲೂರು: ಬಸ್ರಿ ಶಾಲಾ ಮಕ್ಕಳಿಗೆ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More