Blog

ಬೈಲೂರು: ಉಚಿತ ಕನ್ನಡಕ ವಿತರಣೆ


ಬೈಲೂರು: ಲಯನ್ಸ್ ಕ್ಲಬ್ ನೀರೆ ಬೈಲೂರು ಇವರ ವತಿಯಿಂದ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ನಡೆದ ಉಚಿತ ಆರೋಗ್ಯ  ತಪಾಸಣಾ ಶಿಬಿರವನ್ನು ನಡೆಸಲಾಗಿತ್ತು. ಈ ಶಿಬಿರದಲ್ಲಿ ಪಾಲ್ಗೊಂಡ ಸುಮಾರು 30 ಜನರಿಗೆ ಉಚಿತ ಕಣ್ಣಿನ ಶಸ್ತ್ರ ಕ್ರಿಯೆಯನ್ನು ನಡೆಸಲಾಗಿತ್ತು. ಹಾಗೂ ಅಗತ್ಯವಿರುವ 91 ಮಂದಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ನೀರೆ ಬೈಲೂರು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್ ಶೆಟ್ಟಿ, ಪ್ರಾಂತೀಯ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸಾಯರಾಮ್, ವಲಯ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಸದಸ್ಯರಾದ ದಿಲೀಪ್ ಶೆಟ್ಟಿ, ಭಾಸ್ಕರ್ ಶೆಟ್ಟಿ, ಐವನ್ ಮಿರಂದ ಮಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ನಿಯತಿ ಉಪಸಿತರಿದ್ದರು.

Related posts

ಪಿಕಪ್ ವಾಹನ ಕಳ್ಳತನ

Madhyama Bimba

ಮಹಾವೀರ ಕಾಲೇಜಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ಲ್ಯಾಬೋರೇಟರಿ ಉದ್ಘಾಟನೆ

Madhyama Bimba

ಎಸ್ಸೆಸ್ಸೆಲ್ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಯ 93  ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ ಅಂಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More