Blog

ರಾಜ್ಯ ಸರಕಾರದಿಂದ ಬಿಪಿಎಲ್ ಕಾರ್ಡ್ ರದ್ದು


ದಿವಾಳಿ ಎದ್ದಿರುವ ರಾಜ್ಯ ಸರ್ಕಾರದಿಂದ ವೃದ್ದಾಪ್ಯ, ವಿಧವಾ, ಅಂಗವಿಕಲ ವೇತನ ರದ್ದು ಬಡವರ ಬಿಪಿಎಲ್ ಕಾರ್ಡ್ ರದ್ದು ಸರ್ಕಾರದ ಈ ನಡೆ ಖಂಡನೀಯ – ನವೀನ್‌ ನಾಯಕ್‌, ಬಿಜೆಪಿ ಕ್ಷೇತ್ರಾಧ್ಯಕ್ಷರು ಕಾರ್ಕಳ.


ರಾಜ್ಯ ಸರ್ಕಾರ ದಿವಾಳಿ ಎದ್ದಿದ್ದು ಅಭಿವೃದ್ಧಿಗೆ ಹಣ ನೀಡದ ಸ್ಥಿತಿಗೆ ತಲುಪಿದೆ. ಆರ್ಥಿಕ ಮುಗ್ಗಟ್ಟಿನಿಂದ ಸರ್ಕಾರ ನಡೆಸಲು ಆಗದ ಹಿನ್ನಲೆಯಲ್ಲಿ ಈ ಹಿಂದೆ ವಿವಿಧ ಸರ್ಕಾರಗಳು ನೀಡಿದ ಜನಪರ ಯೋಜನೆಗಳನ್ನು ನಿಧಾನವಾಗಿ ನಿಲ್ಲಿಸುವ ಸಂಚು ರೂಪಿಸಿರುವುದು ಖಂಡನೀಯ ಎಂದು ಬಿಜೆಪಿ ಅಧ್ಯಕ್ಷರಾದ ನವೀನ್ ನಾಯಕ್ ತಿಳಿಸಿದ್ದಾರೆ.


ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವ ನೆಪದಲ್ಲಿ ಆದರ ಭಾಗವಾಗಿ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂದ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನಗಳನ್ನು ಈಗಾಗಲೇ ಮನ ಬಂದಂತೆ ತಾಲ್ಲೂಕಿನಾದ್ಯಂತ ಸಾವಿರಾರು ಫಲಾನುಭವಿಗಳ ಪಟ್ಟಿಗಳನ್ನು ರದ್ದು ಪಡಿಸಿದೆ. ಜೊತೆಗೆ ಆರೋಗ್ಯ, ಮನೆ ನಿರ್ಮಾಣ, ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಸೃಷ್ಟಿಸಿಕೊಳ್ಳಲು ಬಡವರು ಮಾಡಿರುವ ಬ್ಯಾಂಕ್ ಸಾಲ ವರದಿಗಳನ್ನು ಪಡೆದು ಅವರ ಬಿಪಿಎಲ್ ಕಾರ್ಡುಗಳನ್ನು ರದ್ದು ಪಡಿಸಿದ್ದಾರೆ. ಬಡವರ ಸೌಲತ್ತುಗಳನ್ನು ಕಿತ್ತುಕೊಳ್ಳುವ ಮೂಲಕ ಅವರನ್ನು ಮತ್ತಷ್ಟು ಬಡತಕ್ಕೆ ತಳ್ಳುವ ಕೆಟ್ಟ ನಿರ್ಧಾರವನ್ನು ರಾಜ್ಯ ಸರ್ಕಾರ ಹೊಂದಿದೆ.


ಸರ್ಕಾರದ ಕೆಟ್ಟ ಚಾಳಿಯಿಂದಾಗಿ ಕಾರ್ಕಳ ತಾಲ್ಲೂಕಿನಾದ್ಯಂತ ಸಾವಿರಾರು ಕುಟುಂಬಗಳು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಬಿಪಿಎಲ್ ಕಾರ್ಡು ಇಲ್ಲದೆ ಬಡ ಕುಟುಂಬಗಳು ಲಕ್ಷಾಂತರ ವೆಚ್ಚದ ಆರೋಗ್ಯ ಸೇವೆಯನ್ನು ಪಡೆಯಲು ಸಾಧ್ಯವಾಗದೆ ಕಂಗಾಲಾಗಿದ್ದಾರೆ. ನಿತ್ಯ ಸಾವಿರಾರು ಕುಟುಂಬಗಳು ತಾಲ್ಲೂಕು ಕಚೇರಿ ಅಲೆದು ಕಾರ್ಡಿಗಾಗಿ ದುಂಬಾಲು ಬೀಳುತ್ತಿದ್ದರು ಆಡಳಿತರೂಡ ರಾಜ್ಯ ಸರ್ಕಾರ ಅವರ ಅಹವಾಲು ಸ್ವೀಕರಿಸದಷ್ಟು ಕುರುಡಾಗಿದೆ. ವಿಧವಾ ವೇತನ, ಅಂಗವಿಕಲ ವೇತನದಂತಹ ಅವಶ್ಯಕ ಸೇವೆ ಸಿಗದಿದ್ದರೆ ಈಗಾಗಲೇ ನೊಂದಿರುವ ಕುಟುಂಬಗಳು ಮತ್ತಷ್ಟು ತೊಳಲಾಟಕ್ಕೆ ಸಿಲುಕಲಿದ್ದಾರೆ. ಸರ್ಕಾರ ಬಡವರ ಭಾಗ್ಯಗಳನ್ನು ಕಿತ್ತುಕೊಳ್ಳುವ ದುಷ್ಟ ಕೃತ್ಯಗಳನ್ನು ನಿಲ್ಲಿಸಬೇಕು. ಅದರಲ್ಲೂ ವಿಶೇಷವಾಗಿ ಬಡವರ ಮೇಲೆ ದಬ್ಬಾಳಿಕೆ ಮಾಡುವಂತ ಇಂತಹ ಕೃತ್ಯಗಳನ್ನು ಉಡುಪಿ ಜಿಲ್ಲಾಡಳಿತ ಮಾಡಬಾರದು. ಮತ್ತು ಕಾರ್ಕಳ ಬಿಜೆಪಿ ಇದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇವೆ. ಎಂದು ಪ್ರಕಟಣೆಯಲ್ಲಿ ಕಾರ್ಕಳ ಕ್ಷೇತ್ರಾಧ್ಯಕ್ಷರಾದ ನವೀನ್‌ ನಾಯಕ್‌ ತಿಳಿಸಿರುತ್ತಾರೆ.
.

Related posts

ನ್ಯಾಯವಾದಿ ಎಂ ಕೆ ವಿಜಯ ಕುಮಾರ್ ಸ್ಮರಣಾರ್ಥ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Madhyama Bimba

ಪೊಲೀಸ್ ಇನ್ಸ್ಪೆಕ್ಟರ್ ನಾಸಿರ್ ಹುಸೇನ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

Madhyama Bimba

ಮಮತಾ ನಾಯಕ್ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More