Blog

ಮೂಡುಬಿದಿರೆ ರೋಟರಿ ಕಾಲೇಜಿಗೆ ಶೇ. 99.45% ಫಲಿತಾಂಶ

ಮೂಡುಬಿದಿರೆ:
2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆ ರೋಟರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗದಲ್ಲಿ ಹಾಜಾರಾದ ಒಟ್ಟು 185 ವಿದ್ಯಾರ್ಥಿಗಳಲ್ಲಿ 184 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 99.45% ಫಲಿತಾಂಶ ದಾಖಲಾಗಿದೆ. ಈ ಪೈಕಿ 77 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ ಮಂದಿ 106 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಿಜ್ಞಾನ ವಿಭಾಗದ ಕೃತಿ ಎನ್ ಶೆಟ್ಟಿ 590 ಅಂಕಗಳನ್ನು (98.33%) ಪಡೆದು ವಿಜ್ಞಾನ ವಿಭಾಗದಲ್ಲಿ ಹಾಗೂ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ದಿಶಾರಾಜ್ 569 (94.8%) ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.

ವಾಣಿಜ್ಯ ವಿಭಾಗದ ಮಾನ್ಯ ಎಮ್ 600 ಕ್ಕೆ 585 ಅಂಕಗಳನ್ನು (97.5%) ಪಡೆದು ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ದಿಶಾ ಶರಲ್ ಲೋಬೋ ಹಾಗೂ ನಿರೀಕ್ಷಾ ಶೆಟ್ಟಿ 582 (97%) ಅಂಕಗಳನ್ನು ಪಡೆದು ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಉತ್ತಮ ಫಲಿತಾಂಶವನ್ನು ದಾಖಲಿಸಿರುವುದಕ್ಕೆ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು ಅಭಿನಂದಿಸಿರುತ್ತಾರೆ ಹಾಗೂ ಆಡಳಿತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿಗಳು, ಸಂಚಾಲಕರು ಮತ್ತು ಸರ್ವಸದಸ್ಯರು, ಸಂಸ್ಥೆಯ ಪ್ರಾಂಶುಪಾಲರನ್ನು, ಉಪನ್ಯಾಸಕ ವೃಂದದವರನ್ನು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.

Related posts

ಕಾರ್ಕಳದಲ್ಲಿ ಕಾಂಗ್ರೆಸ್ ಸಮಾವೇಶ

Madhyama Bimba

ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ಕುಸುಮಾಧರರಿಗೆ ಬೀಳ್ಕೊಡುಗೆ

Madhyama Bimba

ಕಾರ್ಕಳ ಜೇಸಿಸ್ ಅಧ್ಯಕ್ಷೆ ಶ್ವೇತಾ ಗೆ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More