Blog

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ಪತ್ನಿ ಸೌಮ್ಯ ಶೆಟ್ಟಿ ಬಂಧನ


ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ನವ ವಿವಾಹಿತ ಸುದೀಪ್‌ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾರ್ಕಳ ನಗರ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದು ಈ ಬಗ್ಗೆ ಸುದೀಪ್ ರೈ ಪತ್ನಿ ಸೌಮ್ಯ ಶೆಟ್ಟಿಯನ್ನು  ಬಂಧಿಸಿದ್ದಾರೆ.
ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿಯಾದ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ ಸೌಮ್ಯ ಶೆಟ್ಟಿ ಪ್ರೀತಿಸಿ ಸಬ್ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ, ಮದುವೆಯಾದ ಒಂದು ತಿಂಗಳಲ್ಲೇ ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.  ಚಿಕಿತ್ಸೆ ಫಲಕಾರಿಯಾಗದೆ ಮಾ. 30ರಂದು ಮೃತಪಟ್ಟಿದ್ದರು.
ಮಗನ ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿ ಮಗನ ಸಾವಿಗೆ ಸೌಮ್ಯ ಶೆಟ್ಟಿಯೇ ನೇರ ಕಾರಣ ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರಕರಣವನ್ನು ದಾಖಲಿಸಿದ್ದರು.

ಪ್ರಾಥಮಿಕ ಸಾಕ್ಷ್ಯಾಧಾರಗಳ ಮೇರೆಗೆ ಸೌಮ್ಯ ಶೆಟ್ಟಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Related posts

ದಸಂಸ ಮನವಿ

Madhyama Bimba

ದೊಂಡೆರಂಗಡಿಯಲ್ಲಿ ರಾಷ್ಟ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Madhyama Bimba

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೂಬ ಪರವರವರಿಗೆ ಯುವ ಸಂಗಮದಿಂದ ಗೌರವ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More