ಕಾರ್ಕಳದ ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜೋಡು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಸಹಕಾರ ಸಿಂಧೂರ ಲೋಕಾರ್ಪಣೆ ಮತ್ತು ಸೊಸೈಟಿಯ ತ್ರಿಂಶತಿ ಸಂಭ್ರಮ ಕಾರ್ಯಕ್ರಮವು ಏ. 26ರಂದು ಸೊಸೈಟಿ ಯ ಆವರಣದಲ್ಲಿ ಪೂರ್ವಾಹ್ನ 10.30ಕ್ಕೆ ನಡೆಯಲಿದೆ.



ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು, ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಹಕಾರ ರತ್ನ ಎಂ. ಎನ್. ರಾಜೇಂದ್ರ ಕುಮಾರ್ ಸಹಕಾರ ಸಿಂಧು ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ.



ಸೊಸೈಟಿಯ ಅಧ್ಯಕ್ಷರಾದ ಸಹಕಾರ ರತ್ನ ಕಡಾರಿ ರವೀಂದ್ರ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ, ಉದಯ ಕೃಷ್ಣಯ್ಯಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಮುನಿಯಾಲು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು ಬಿ., ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರಾದ ಗೋಕುಲ್‌ದಾಸ್ ನಾಯಕ್, ಗೀತಾಂಜಲಿ ಸಿಲ್ಕ್ಸ್‌ನ ಉದ್ಯಮಿ ಸಂತೋಷ್ ವಾಗ್ಲೆ, ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಲಾವಣ್ಯ ಕೆ. ಆರ್., ಕುಂದಾಪುರ ವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್, ಶ್ರೀ ಕ್ಷೇತ್ರ ಅಡಪಾಡಿ ಪಳ್ಳಿ ಇಲ್ಲಿಯ ಧರ್ಮದರ್ಶಿ ಪುಂಡಲೀಕ್ ನಾಯಕ್, ಹಿರ್ಗಾನ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಚೇತನ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.



ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪೂರ್ವಾಹ್ನ ಗಂಟೆ 9.30ರಿಂದ ಕಲರ್ಸ್ ಕನ್ನಡ ಖ್ಯಾತಿಯ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ, ಅಪರಾಹ್ನ 3.00ರಿಂದ ತೆಂಕು ಬಡಗು ತಿಟ್ಟಿನ ಖ್ಯಾತ ಕಲಾವಿದರ ಸಮ್ಮೀಲನದಲ್ಲಿ ಕರ್ಣಾರ್ಜುನ- ಸುಧನ್ವಾರ್ಜುನ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
