ಮೂಡುಬಿದಿರೆ

  ಮಹಾವೀರ ಕಾಲೇಜು ವಜ್ರಮಹೋತ್ಸವ ಮೆರವಣಿಗೆ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವದ ಅಂಗವಾಗಿ ನಡೆದ ಮೆರವಣಿಗೆಯನ್ನು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಕಾಲೇಜಿನ ಅಧ್ಯಕ್ಷ ಕೆ ಅಭಯಚಂದ್ರ ಜೈನ್ ಹಾಗೂ ಎಂಸಿಎಸ್ ಸೊಸೈಟಿ ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ. ಉದ್ಘಾಟಿಸಿದರು.

ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಎಂ ಸಿ ಎಸ್ ಸೊಸೈಟಿ ಅಧ್ಯಕ್ಷ ಬಾಹುಬಲಿ ಪ್ರಸಾದ್, ಕಾಲೇಜು ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ, ಪಿಯು ಪ್ರಾಂಶುಪಾಲ ವಿಜಯಲಕ್ಷ್ಮಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯಅಧ್ಯಕ್ಷ ಸುಚರಿತ ಶೆಟ್ಟಿ, ಅಧ್ಯಕ್ಷ ನಾಗರಾಜ್, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು, ಬೋಧಕರು, ಬೋಧಕೇತರರು, ಹಳೆವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಮೆರವಣಿಗೆ ಸಮಾಜಮಂದಿರದಿಂದ ಹೊರಟು ಮುಖ್ಯ ರಸ್ತೆಯಲ್ಲಿ ಸಾಗಿ ಮಹಾವೀರ ಕಾಲೇಜು ವರೆಗೆ ನಡೆಯಿತು.

Related posts

ಮೇ 16ರಿಂದ ಸರ್ಕಾರಿ ಶಾಲೆಗಳಲ್ಲಿ  ದಾಖಲಾತಿ ಆಂದೋಲನ

Madhyama Bimba

ಪೊಲೀಸ್ ಪ್ರಕಟಣೆ 

Madhyama Bimba

ಜ್ಞಾನದೊಂದಿಗೆ ಸಂವೇದನೆ, ಭಾವನೆ ಇರಲಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More