ಕಾರ್ಕಳಹೆಬ್ರಿ

ಕಾರ್ಕಳದಲ್ಲಿ 24 ರಿಂದ 26ರವರೆಗೆ ಬೃಹತ್ ಹಲಸು ಮೇಳ

ಕಾರ್ಕಳ: ಕಾರ್ಕಳ ಬಿಲ್ಲವ ಸಭಾಭವನದಲ್ಲಿ ಏಪ್ರಿಲ್ 25ರಿಂದ 26ರವರೆಗೆ ಬೃಹತ್ ಹಲಸು ಮೇಳ ಆಯೋಜಿಸಲಾಗಿದೆ ಎಂದು ವಂಶಿ ಇವೆಂಟ್ಸ್‌ನ ರಮಿತಾ ಸೂರ್ಯವಂಶಿ ತಿಳಿಸಿದರು.

ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೇಳವು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ವಿವಿಧ ಕಾರ್ಯಕ್ರಮಗಳು ಜನರನ್ನು ಆಕರ್ಷಿಸಲಿವೆ.

ರೋಟರಿ ಕ್ಲಬ್‌ನ ನವೀನ್ ಶೆಟ್ಟಿ ಮಾತನಾಡಿ, ಹಲಸಿನ ಹಣ್ಣಿನಲ್ಲಿರುವ ಪೌಷ್ಟಿಕ ಹಾಗೂ ಔಷಧೀಯ ಗುಣಗಳ ಬಗ್ಗೆ ವಿವರಿಸಿ, ಗ್ರಾಮೀಣ ಸೊಗಡನ್ನು ಇಂದಿನ ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಗಣೇಶ್ ಶೆಟ್ಟಿ ಮಾತನಾಡಿ, ಹಲಸಿಗೆ ಮೌಲ್ಯವರ್ಧನೆ ನೀಡುವುದು ಮೇಳದ ಮುಖ್ಯ ಉದ್ದೇಶವಾಗಿದ್ದು, ವಿವಿಧ ರಾಜ್ಯಗಳ ಹಲಸಿನ ಜಾತಿಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ರೈತರು ನೇರವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶವೂ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮೇಳದಲ್ಲಿ ಇಳಕಲ್ ಖಾದಿ ಸೀರೆಗಳು, ಗೃಹಬಳಕೆಯ ವಸ್ತುಗಳು, ಬಿದಿರು ಉತ್ಪನ್ನಗಳು, ದೀಪಾಲಂಕೃತ ಮಣ್ಣಿನ ಮಡಕೆಗಳು ಸೇರಿದಂತೆ 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. ಜೊತೆಗೆ ಭಜನಾ ಸಪ್ತಸ್ವರ, ಸಂಗೀತ ಸ್ಪರ್ಧೆಗಳು ಹಾಗೂ ಹಲಸಿನ ವಿವಿಧ ಖಾದ್ಯಗಳ ಪ್ರದರ್ಶನವೂ ನಡೆಯಲಿದೆ ಎಂದು ಉದ್ಯಮಿ ವಾಸುದೇವ ಭಟ್ ಹೇಳಿದರು.

ಈ ಸಂದರ್ಭದಲ್ಲಿ ವಂಶಿ ಇವೆಂಟ್ಸ್ ಹಾಗೂ ಬೆನಕ ಇವೆಂಟ್ಸ್‌ನ ಪ್ರತಿನಿಧಿಗಳು, ಯುವವಾಹಿನಿಯ ಅಧ್ಯಕ್ಷ ಪ್ರಕಾಶ್ ಪೂಜಾರಿ ಕೆರ್ವಾಶೆ  ಭಾಸ್ಕರ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ನಮ್ಮ ಬದುಕಿನಲ್ಲಿ ಗುರಿ ತಲುಪಬೇಕಾದರೆ ಶಿಸ್ತು ಅತೀ ಅಗತ್ಯ : ಡಾ.ರವಿಪ್ರಸಾದ್ ಹೆಗ್ಡೆ

Madhyama Bimba

ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಮಕರ ಸಂಕ್ರಾಂತಿ ಸಂಭ್ರಮ

Madhyama Bimba

ಕಾರ್ಕಳ: ಮಲಗಿದ್ದಲ್ಲಿಯೇ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More