ಕಾರ್ಕಳಹೆಬ್ರಿ

ಹೆಬ್ರಿ ಎಸ್.ಆರ್. ಪ್ರೌಢಶಾಲೆ ಶೇ. 100 ಫಲಿತಾಂಶ

ಈ ಬಾರಿಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಹೆಬ್ರಿಯ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 18 ನೇ ಬಾರಿ 100% ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ದೀಪ್ತಿ ಎಸ್. ಆಚಾರ್ಯ 593 (94.88%)ಅಂಕ ಪಡೆದು ಪ್ರಥಮ ಸ್ಥಾನ, ಪ್ರೀತಿ ನಾಯ್ಕ್ 590 (94.40%) ಮತ್ತು ಸೌಜನ್ಯ ಶೆಟ್ಟಿ 590 (94.40%)ಅಂಕ ಪಡೆದು ದ್ವಿತೀಯ ಸ್ಥಾನ, ಸೃಜನ್ ಎಸ್ ನಾಯ್ಕ್ 580 (92.80%)ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾದ 53 ವಿದ್ಯಾರ್ಥಿಗಳಲ್ಲಿ, 11 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹೆಚ್.ನಾಗರಾಜ ಶೆಟ್ಟಿ, ಕಾರ್ಯದರ್ಶಿಯವರಾದ ಸಪ್ನಾ ಎನ್. ಶೆಟ್ಟಿ ಅಭಿನಂದಿಸಿದ್ದಾರೆ.

Related posts

ಕಾರ್ಕಳ: ಮಲಗಿದ್ದಲ್ಲಿಯೇ ಮೃತ್ಯು

Madhyama Bimba

ಕಾರ್ಕಳ: ರಸ್ತೆ ಬದಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳವು

Madhyama Bimba

ಮುದ್ರಾಡಿಯ ಶಶಿಕಲಾ ಡಿ.ಪೂಜಾರಿ ಅವರಿಗೆ ಸೇವಾ ರತ್ನ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More