ಕಾರ್ಕಳ

ಮುದ್ರಾಡಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

ಹೆಬ್ರಿ :ವಿದ್ಯಾಸಾಗರ ಎಜುಕೇಶನ್ ಟ್ರಸ್ಟ್ (ರಿ.) ಮುದ್ರಾಡಿ ವತಿಯಿಂದ ನಡೆಸಲ್ಪಡುವ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆ 2025-26 ನೆ ಸಾಲಿನ 10 ನೆ ತರಗತಿ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.

604 ಅಂಕವನ್ನು ಶೇ. 96.64 ಪಡೆದ ಪ್ರತೀಕ್ಷಾ ಕುಲಾಲ್ ಬಲ್ಲಾಡಿ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. 574 ಅಂಕವನ್ನು ಶೇ. 91.84 ಪಡೆದ ಸ್ನೇಹಾ, ವರಂಗ ದ್ವಿತೀಯ ಸ್ಥಾನವನ್ನು, 538 ಅಂಕವನ್ನು ಶೇ.86.08 ಪಡೆದ ಲಾವಣ್ಯ, ಬಲ್ಲಾಡಿ ತೃತೀಯ ಸ್ಥಾನವನ್ನು ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ.

3 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 11 ಮಂದಿ ಪ್ರಥಮ ಶ್ರೇಣಿಯಲ್ಲಿ, ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ, ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಉತ್ತಮ ಫಲಿತಾಂಶದ ಸಾಧನೆಗಾಗಿ ಟ್ರಸ್ಟಿನ ಅಧ್ಯಕ್ಷ ದಿವಾಕರ್ ಎನ್. ಶೆಟ್ಟಿ, ಸರ್ವ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು, ಬೋಧಕ ವೃಂದ, ಬೋಧಕೇತರ ಸಿಬ್ಬಂದಿಯವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಕರಕರಿ ಫ್ರೆಂಡ್ಸ್ ಸೇವಾ ಬಳಗದ ಕರಕರಿ ಫ್ರೆಂಡ್ಸ್ ಸಂಭ್ರಮ ಮತ್ತು ಸಾಧಕರಿಗೆ ಸನ್ಮಾನ

Madhyama Bimba

ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಮಕರ ಸಂಕ್ರಾಂತಿ ಸಂಭ್ರಮ

Madhyama Bimba

ಮುದ್ರಾಡಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More