ಕಾರ್ಕಳ

ಕ್ರೈಸ್ಟ್‌ಕಿಂಗ್: ದ್ವಿತೀಯ ಪಿಯುಸಿ ಮರುಮೌಲ್ಯಮಾಪನ- ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಪ್ರಜ್ವಲ್ ಶೆಟ್ಟಿ- ಉಡುಪಿ ಜಿಲ್ಲೆಗೆ ದ್ವಿತೀಯ ರ್‍ಯಾಂಕ್

ಕಾರ್ಕಳ: ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಶೆಟ್ಟಿ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ನಾಲ್ಕನೇ ರ್‍ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ರ್‍ಯಾಂಕ್ ಪಡೆದುಕೊಂಡಿದ್ದಾನೆ.

ಇದಕ್ಕೂ ಮೊದಲು ರಾಜ್ಯಕ್ಕೆ ಐದನೇ ರ್‍ಯಾಂಕ್ ಪಡೆದಿದ್ದ ಪ್ರಜ್ವಲ್ ಶೆಟ್ಟಿ ವ್ಯವಹಾರ ಅಧ್ಯಯನ ವಿಷಯದಲ್ಲಿ ಒಂದು ಹೆಚ್ಚವರಿ ಅಂಕವನ್ನು ಪಡೆಯುವ ಮೂಲಕ ರ್‍ಯಾಂಕ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾನೆ.

ಇವನು ಇರ್ವತ್ತೂರು ನಿವಾಸಿ ರಿಕ್ಷಾ ಚಾಲಕ  ಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಜ್ಯೋತಿ ಶೆಟ್ಟಿ ದಂಪತಿಗಳ ಪುತ್ರ.

Related posts

ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ

Madhyama Bimba

ಮುದ್ರಾಡಿಯಲ್ಲಿ ಅಂಬಾತನಯರ ಸಂಸ್ಮರಣೆ

Madhyama Bimba

ಶ್ರೀಮತಿ ಮಮತಾ ರಾಜು ಹಾಗೂ ಮಂಜುಳಾ ವಿಶ್ವನಾಥ್ ಅವರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More