ಕಾರ್ಕಳಹೆಬ್ರಿ

ಸೇನಾ ಪೂರ್ವ ಸಿದ್ಧತಾ ತರಬೇತಿ : ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗ ದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು,2006 ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27 ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ)

ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿ ಯನ್ನು ಮೇ 13ರವರೆಗೆ ವಿಸ್ತರಿಸಲಾಗಿದೆ. ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷ ನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ರ್‍ಯಾಲಿಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ವೆಬ್‌ಸೈಟ್ https://udupi.nic.in ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲ್ಯೂಎಸ್ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

Madhyama Bimba

ಕಾರ್ಕಳ: ಕುಕ್ಕುಂದೂರಿನಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ

Madhyama Bimba

ಕಾರ್ಕಳ: ಮನೆಯಲ್ಲಿದ್ದ 49 ಸಜೀವ ಮದ್ದುಗುಂಡುಗಳ ಕಳ್ಳತನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More