ಮೂಡುಬಿದಿರೆ

ಮಂಗಳೂರು ವಿವಿ ಮಟ್ಟದ ಸಾಫ್ಟ್ ಬಾಲ್ ಪಂದ್ಯಾಟ : ಸನ್ಮಾನ

ಮೂಡುಬಿದಿರೆ : ಇಲ್ಲಿನ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇವುಗಳ ಜಂಟಿ ಆಯೋಜನೆಯಲ್ಲಿ ಎಂ. ಸುಕುಮಾರ್ ಶೆಟ್ಟಿ ಹಾಗೂ ಶಿರ್ವ ಗ್ರೇಸಿ ಮಚಾದೋ ಟ್ರೋಫಿಗಾಗಿ ಶ್ರೀ ಮಹಾವೀರ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ಅಂತರಕಾಲೇಜು ಸಾಫ್ಟ್ ಬಾಲ್ ಪಂದ್ಯಾವಳಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯೋಜಕರಾದ ಡಾ|| ಕೆ. ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು.

ರಾಷ್ಟ್ರೀಯ ಸಾಫ್ಟ್ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಾಲ್ವರು ಆಟಗಾರ್ತಿಯರನ್ನು ಸನ್ಮಾನಿಸಲಾಯಿತು.

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ|| ಜೆರಾಲ್ಡ್ ಸಂತೋಷ್ ಡಿಸೋಜ, ಮೂಡುಬಿದಿರೆ ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಪಡುಮಾರ್ನಾಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದಯಾನಂದ ಪೈ ಆಟಗಾರರಿಗೆ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ದೈಹಿಕ ಶಿಕ್ಷಣ ನಿರ್ದೇಶಕ ರತ್ನಾಕರ ಪುತ್ರಾಯ ಸ್ವಾಗತಿಸಿದರು. ಉಪನ್ಯಾಸಕರಾದ ಸಂತೋಷ್ ವಂದಿಸಿದರು. ಉಪನ್ಯಾಸಕ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಅಭ್ಯರ್ಥಿ ಪರವಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತಯಾಚನೆ

Madhyama Bimba

ವಿಶ್ರಾಂತ ಶಿಕ್ಷಕ ಶಿಶುಪಾಲ ಹೆಗ್ಡೆ ನಿಧನ

Madhyama Bimba

ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಬ್ರಹ್ಮಕಲಶಕ್ಕೆ ದೇಣಿಗೆ ನೀಡಿದ ಕಲ್ಲಬೆಟ್ಟು ಗಣೇಶ ಸೇವಾ ಟ್ರಸ್ಟ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More