Blog

ಅಂಕಿಹಳ್ಳಿಯ ದೇವಸ್ಥಾನಕ್ಕೆ ಧರ್ಮಸ್ಥಳದಿಂದ ರೂ 1.50 ಲಕ್ಷ ಧನ ಸಹಾಯ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವಸ್ಥಾನ ಜೀರ್ಣೋದ್ದಾರಕ್ಕೆ ₹1.50 ಲಕ್ಷ ಧನಸಹಾಯ ಹಸ್ತಾಂತರ.

ಸಕಲೇಶಪುರ :-ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ₹1.50 ಲಕ್ಷ ಮೊತ್ತದ ಡಿ.ಡಿ.ಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಅವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ನೆರವು ದೇವಸ್ಥಾನದ ಪುನರ್ ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಮಹತ್ವದ ಬೆಂಬಲವಾಗಿದ್ದು, ಸ್ಥಳೀಯ ಭಕ್ತರು ಮತ್ತು ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ರಾಜೇಶ್ ಎಂ, ಆಲೂರು ಯೋಜನಾಧಿಕಾರಿ ರತ್ನಾಕರ್ ಕೊಠಾರಿ, ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

Related posts

ಮೂಡುಬಿದಿರೆಯಲ್ಲಿ ಬಂಟರ ಮಹಿಳಾ ದಿನಾಚರಣೆ

Madhyama Bimba

ಬೇಕಾಗಿದ್ದಾರೆ

Madhyama Bimba

ಕುಕ್ಕುಂದೂರು ದುರ್ಗಾನಗರ ಬಳಿ ಕಾರು ಪಲ್ಟಿ ಯುವಕರಿಗೆ ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More