ಕಾರ್ಕಳಹೆಬ್ರಿ

ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಅವಕಾಶ

ಕರ್ನಾಟಕ ಪ್ರೀ ಯೂನಿವರ್ಸಿಟಿ ಕೋರ್ಸ್ ಸ್ಟೇಟ್ ಲೆವೆಲ್ ಪರೀಕ್ಷಾ ನಿಯಮಾವಳಿ 1997 ರ ನಿಯಮ 29 (1) ಹಾಗೂ 30 (1) ರ ಪ್ರಕಾರ 2026 ರ ದ್ವಿತೀಯ ಪಿ.ಯು.ಸಿ ಪರೀಕ್ಷೆ -2 ರ ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು, ಮರುಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು, 2026 ರ ಪರೀಕ್ಷೆ -2 ಕ್ಕೆ ಹಾಜರಾದ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಛಾಯಾ ಪ್ರತಿಗಳಿಗೆ ಅರ್ಜಿ ಸಲ್ಲಿಸಿ ಛಾಯಾ ಪ್ರತಿ ಪಡೆದ ವಿಷಯಗಳಿಗೆ ಮಾತ್ರ ಮರು ಮೌಲ್ಯಮಾಪನ / ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿರುವ ವಿಷಯಗಳಿಗೆ ಪ್ರತ್ಯೇಕವಾಗಿ ಮರುಎಣಿಕೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆನ್‌ಲೈನ್‌ನಲ್ಲಿ ಹೊರತುಪಡಿಸಿ ಇನ್ನಾವುದೇ ವಿಧಾನಗಳಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ನಿಗಧಿಯಾಗಿರುವ ಶುಲ್ಕವನ್ನು ಆನ್‌ಲೈನ್ ಮೂಲಕ  KARNATAKA-ONE-PAYMENT GATEWAY  ಮುಖಾಂತರ ಪಾವತಿಸಲು ಅವಕಾಶವಿರುತ್ತದೆ.

ಛಾಯಾ ಪ್ರತಿಗಾಗಿ ಅರ್ಜಿ ಸಲ್ಲಿಸಲು ಪ್ರತಿ ವಿಷಯಕ್ಕೆ ರೂ. 530, ಮರು ಮೌಲ್ಯ ಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಪ್ರತಿ ವಿಷಯಕ್ಕೆ ರೂ. 1670 ಶುಲ್ಕ ನಿಗಧಿಪಡಿಸಲಾಗಿದ್ದು, ಅಂಕಗಳ ಮರುಎಣಿಕೆಗಾಗಿ ಯಾವುದೇ ಶುಲ್ಕ ಇರುವುದಿಲ್ಲ.

ಛಾಯಾ ಪ್ರತಿಗಾಗಿ ಅರ್ಜಿ ಸಲ್ಲಿಸಲು  (ಮೇ 21ರಿಂದ) – ಮೇ 23 ಕೊನೆಯ ದಿನ. ಛಾಯಾ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಮೇ22 ರಿಂದ 24 ರ ವರೆಗೆ ಕಾಲಾವಕಾಶವಿದೆ. ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು (ಛಾಯಾ ಪ್ರತಿ ತೆಗೆದುಕೊಂಡವರಿಗೆ ಮಾತ್ರ) ಮೇ 22 ರಿಂದ 25 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಂಡಲಿಯ ಸಹಾಯವಾಣಿ ಸಂಖ್ಯೆ: 080-23310075, 23310076 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಸಭಾಭವನ ನಿರ್ಮಾಣಕ್ಕೆ 50.00 ಲಕ್ಷ ಅನುದಾನ ಬಿಡುಗಡೆ

Madhyama Bimba

ಕ್ರೈಸ್ಟ್‌ಕಿಂಗ್‌ನಲ್ಲಿ ವರ್ಟೆಕ್ಸ್ ವೆಂಚರ್ – 2026 ಬೇಸಿಗೆ ಶಿಬಿರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More