ಕಾರ್ಕಳ

ಎಸ್‌ವಿಟಿ ಕಾಲೇಜಿನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಘಟಕ ಮತ್ತು ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಉಡುಪಿ ಇದರ ಸಹಯೋಗದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮವು ಜರುಗಿತು.

ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕಿ, ಪ್ರಸೂತಿ ತಂತ್ರಜ್ಞೆ ಡಾ| ಅಪರ್ಣಾ ಜೈನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿನಿಯರಿಗೆ ಆರೋಗ್ಯದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಗೀತಾ. ಜಿ ಯವರು ವಹಿಸಿದ್ದರು.
ವೇದಿಕೆಯಲ್ಲಿ ಸಂಶೋಧನಾ ಪ್ರಾಧ್ಯಾಪಕರಾದ ಡಾ| ಅನ್‌ಲಾ ಶೆಟ್ಟಿ, ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಕು.ಸೋನಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್ ಯೋಜನಾಧಿಕಾರಿ ಕು. ವಿಜೇತ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಮುನೀರ ಕಾರ್ಯಕ್ರಮ ನಿರೂಪಿಸಿದರು. ಐಮನ್ ಹಾಜೀರಾ ವಂದಿಸಿದರು.

Related posts

ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

Madhyama Bimba

ದುರ್ಗದಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಸಮಿತಿ ಮಹಾಸಭೆ

Madhyama Bimba

ಶ್ರೀ ಮಹಾಮ್ಮಾಯೀ ದೇವಸ್ಥಾನ ಹಂಚಿಕಟ್ಟೆ ಪ್ರತಿಷ್ಠಾ ವರ್ಧಂತ್ಯುತ್ಸವ, ಭಜನಾ ಮಂಗಲೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More