ಕಾರ್ಕಳಹೆಬ್ರಿ

ಡಿ.ಇಎಲ್.ಇಡಿ ಕೋರ್ಸಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ಎಎಲ್.ಇಡಿ ಕೋರ್ಸುಗಳ ಸರಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‌ಲೈನ್ ಮೂಲಕ ಜೂನ್ 1 ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ ಶುಲ್ಕದ ವಿವರಗಳು ಹಾಗೂ ಜಿಲ್ಲಾವಾರು ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಅಧಿಸೂಚನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಕೇಂದ್ರಗಳಲ್ಲಿ ಅಂತಿಮ ದಿನಾಂಕದ ಒಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೀಪಾ ಶೆಟ್ಟಿ ಹೆಚ್, ಡಯಟ್ ಉಪನ್ಯಾಸಕರು, ಮೊ.ನಂ: 9591475489 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಹೆಬ್ರಿ ಎಸ್.ಆರ್ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗೆ ಬಹುಮಾನ

Madhyama Bimba

ಕ್ರೈಸ್ಟ್‌ಕಿಂಗ್: ಅಚೀವರ್ಸ್ ದಿನಾಚರಣೆ

Madhyama Bimba

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More