ಕಾರ್ಕಳಹೆಬ್ರಿ

ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖ್ ಸಮುದಾಯದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರುವ ಕಾನೂನು ಪದವೀಧರ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3,50,000 ಗಳ ಮಿತಿಯಲ್ಲಿರಬೇಕು. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳ ವರೆಗೆ ಮಾಹೆಯಾನ ರೂ.೫೦೦೦ ಗಳಂತೆ ಶಿಷ್ಯವೇತನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ, ಅವಶ್ಯವಿರುವ ದಾಖಲಾತಿಗಳೊಡನೆ ಜೂನ್ 12 ರ ಒಳಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಶಿವಳ್ಳಿ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 0820-2574596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ನಾಗರಾಜ್ ಕಾಡುಹೊಳೆ ಅವರಿಗೆ ಕೋಸ್ಟಲ್ ಕಾಮಿಡಿ ಸ್ಟಾರ್ ೨ನೇ ರನ್ನರ್ ಆಪ್ ಪ್ರಶಸ್ತಿ

Madhyama Bimba

ಹೆಬ್ರಿ: ಮೋಟಾರ್ ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿ- ಗಾಯ

Madhyama Bimba

ಕಾರ್ಕಳ: ಕೆಸರುಗದ್ದೆಗೆ ಬಿದ್ದು ಉಸಿರುಗಟ್ಟಿ ವ್ಯಕ್ತಿ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More