ಕಾರ್ಕಳಹೆಬ್ರಿ

ಡಿಪ್ಲೋಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಾತಿಗೆ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣ ರಾಗಿರಬೇಕು). 2026 ರ ಜೂನ್ 12 ಕ್ಕೆ ಅಭ್ಯರ್ಥಿಗಳ ವಯಸ್ಸು 19 ವರ್ಷ ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50೦ ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.

ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ಜೂನ್ 12 ರ ಒಳಗಾಗಿ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ-577412 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ ನಿಗಧಿತ ದಿನಾಂಕದ ನಂತರ ಡಿ.ಡಿ.ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮಕಲಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ: ವಿಶ್ವ ಕ್ಷಯರೋಗ ದಿನಾಚರಣೆ

Madhyama Bimba

ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More