ಕಾರ್ಕಳಹೆಬ್ರಿ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15 ಮೆಟ್ರಿಕ್ ಪೂರ್ವ ಹಾಗೂ 8 ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹೆಚ್.ಎಂ.ಐ.ಎಸ್ ತಂತ್ರಾಂಶದ https://swdhmis.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 30 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಉಡುಪಿ ದೂ.ಸಂಖ್ಯೆ: 0820-2528884, ಮೊ.ನಂ: 9480843209, ಕುಂದಾಪುರ ದೂ.ಸಂಖ್ಯೆ: 08254-230609, 298089, ಮೊ.ನಂ:9480843208 ಹಾಗೂ ಕಾರ್ಕಳ ದೂ.ಸಂಖ್ಯೆ : 08258-298134, 232133, ಮೊ.ನಂ: 9480843207 ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ನಕ್ರೆ: ಅಕ್ರಮ ಕಲ್ಲುಗಣಿಗಾರಿಕೆ- ಬಂಡೆ ಒಡೆಯಲು ಸ್ಫೋಟಕ ಬಳಕೆ- ಪ್ರಕರಣ ದಾಖಲು

Madhyama Bimba

ಕೆಮ್ಮಣ್ಣು ನಿಟ್ಟೆಯ ವಿದ್ಯಾರ್ಥಿನಿಯ ಅದ್ಭುತ ಸಾಧನೆ

Madhyama Bimba

ಅರ್ಜುನಾಪುರದಲ್ಲಿ ವಿದ್ವಾನ್ ವೇ|| ಮೂ|| ಉಮೇಶ್ ಭಟ್ ಅವರಿಗೆ ಶನಿವಾರ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More