ಕಾರ್ಕಳ: ಕರ್ನಾಟಕ ಜೈ ಭೀಮ್ ಯುವ ಸೇನಾ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಯುವ ಸೇನೆ ಕಾರ್ಕಳ ಘಟಕದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ, ನೋಟ್ ಪುಸ್ತಕಗಳ ವಿತರಣೆ, ಅನಾರೋಗ್ಯಪೀಡಿತರಿಗೆ ಧನಸಹಾಯ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಮೇ.24ರಂದು ಕಾರ್ಕಳದ ಬಂಡೀಮಠ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಯುವ ಸೇನೆಯ ರಾಜ್ಯಾಧ್ಯಕ್ಷ ಎಸ್.ಪಿ ಅಶೋಕ್ ಕುಮಾರ್ ಹೇಳಿದರು.
ಅವರು ಕಾರ್ಕಳದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಲಿದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ರಮೇಶ್.ಬಿ, ಲೋಕೇಶ್ ಎಂ.ಎಸ್., ಕೃಷ್ಣ ಎಸ್.ಕೆ., ಮಹಿಳಾ ಘಟಕದ ಶಾಂತಿ ನಿಟ್ಟೆ, ವಾಣಿ ಜಾರ್ಕಳ, ರಮ್ಯಾ ಉಪಸ್ಥಿರಿದ್ದರು.
