ಕಾರ್ಕಳಹೆಬ್ರಿ

ಬಹುಮಾನ ಹಣ ಮಂಜೂರು : ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗೆ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಚಾಲಕ ಪರಾರಿ

Madhyama Bimba

ರಾಜ್ಯಮಟ್ಟದ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳ ಸಾಧನೆ

Madhyama Bimba

ಕಾರ್ಕಳ: ಜಾಗದ ತಕರಾರು – ತಮ್ಮನಿಂದ ಅಣ್ಣನ ಕೊಲೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More