ಕಾರ್ಕಳ

ರಕ್ತದಾನಿಗಳಿಗೆ ಪುರಸ್ಕಾರ ಆಹ್ವಾನ

ರಕ್ತದ ಗುಂಪನ್ನು ಕಂಡುಹಿಡಿದ ಡಾ. ಕಾರ್ಲ್ ಲ್ಯಾಂಡ್ ಸ್ಟೇನಿಯರ್‌ರವರ ಹುಟ್ಟುಹಬ್ಬವನ್ನು ಸ್ಮರಿಸಿ ಪ್ರತಿ ವರ್ಷ ವಿಶ್ವದಾದ್ಯಂತ  ಜೂನ್ 14 ರಂದು  ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಆ ಪ್ರಯುಕ್ತ ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯು ಹಮ್ಮಿಕೊಳ್ಳುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಕನಿಷ್ಠ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳನ್ನು ಹಾಗೂ ಜಿಲ್ಲಾ ಘಟಕದಿಂದ ಕನಿಷ್ಠ 15 ಬಾರಿ ಮೇಲ್ಪಟ್ಟು ರಕ್ತದಾನ ಮಾಡಿರುವ ದಾನಿಗಳನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಗುವುದು.

ಆದ್ದರಿಂದ ರಕ್ತದಾನಿ ಅಥವಾ ಅವರಿಗೆ ಸಂಬಂಧಿಸಿದವರು ರಕ್ತದಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ದಾಖಲೆಯ ಪ್ರತಿ, ವಿಳಾಸ ಹಾಗೂ ಮೊಬೈಲ್ ಸಂಖ್ಯೆಗಳ ವಿವರಗಳೊಂದಿಗೆ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ, ರೆಡ್‌ಕ್ರಾಸ್ ಭವನ, ಬ್ರಹ್ಮಗಿರಿ, ಉಡುಪಿ ಇವರಿಗೆ ಮೇ 28 ರೊಳಗೆ ವಿವರಗಳನ್ನು ಸಲ್ಲಿಸುವಂತೆ ರೆಡ್‌ಕ್ರಾಸ್ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ನಿವೇಶನ ಅನಾವರಣ

Madhyama Bimba

ಕಾರ್ಕಳ: ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

Madhyama Bimba

ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ಸರ್ಕಾರದ ನಿರ್ಧಾರ, ಈ ವಿಚಾರವನ್ನು ಬಿಜೆಪಿ ಸುಖಾಸುಮ್ಮನೇ ರಾಜಕೀಯಗೊಳಿಸುತ್ತಿದೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More