Blog

ಹೆಬ್ರಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ದರೋಡೆ

ಹೆಬ್ರಿಯಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನ- ಬೆಳ್ಳಿ ದರೋಡೆ.

ಹೆಬ್ರಿ ನಗರದ ನಿವಾಸಿ ಕೀರ್ತನ ಪ್ರಭು  ಎಂಬವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು ‍59.97 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.

ಕೀರ್ತನ ಪ್ರಭು ಸೋಮವಾರ ಬೆಳಿಗ್ಗೆ  ಎದ್ದು ನೋಡಿದಾಗ ಮನೆಯ ಹಿಂಭಾಗ ಹಾಗೂ ಎದುರಿನ ಬಾಗಿಲುಗಳು ತೆರೆದಿರುವುದು ಗಮನಿಸಿದಾಗ ಹಾಲ್ ಬಳಿ ಇದ್ದ ಗೋದ್ರೇಜ್ ಬಾಗಿಲು ತೆರೆದಿತ್ತು. ಅನುಮಾನಗೊಂಡು ಮನೆಯ ಮೊದಲ ಮಹಡಿಯ ಮಲಗುವ ಕೋಣೆಗೆ ತೆರಳಿ ಪರಿಶೀಲಿಸಿದಾಗ ಕಬ್ಬಿಣದ ಗೋದ್ರೇಜ್ ಲಾಕರ್ ತೆರೆದು ಕಳ್ಳರು ಮನೆಯ ಹಿಂಭಾಗದ ಕಿಟಕಿಯ ಚಿಲಕದ ಕೊಂಡಿಯನ್ನು ಮೀಟಿ ಒಳನುಗ್ಗಿ, ಮೊದಲ ಮಹಡಿಯಲ್ಲಿ ಇರಿಸಿದ್ದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ.

ಹೆಬ್ರಿ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Related posts

ಯೂತ್ ಬಿಲ್ಲವ (ರಿ.) ಕಾರ್ಕಳ:  ಅಧ್ಯಕ್ಷರಾಗಿ ಶರತ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್

Madhyama Bimba

ಸತ್ಯ ನಾರಾಯಣ ಹೆಬ್ಬಾರ್ ನಿಧನ

Madhyama Bimba

ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ನಿಶ್ಚಿತ: ನವೀನ್ ನಾಯಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More