ಕಾರ್ಕಳಹೆಬ್ರಿ

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಚಾಲಕ ಪರಾರಿ

ಕಾರ್ಕಳ: ಪಳ್ಳಿ ಜಂಕ್ಷನ್ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಮೇ. 26ರಂದು ವರದಿಯಾಗಿದೆ.

ಮೂಡುಬೆಳ್ಳೆಯ ನಾಗೇಶ್ ಆಚಾರ್ಯ (34) ಗಾಯಗೊಂಡವರು.

ಪಳ್ಳಿ ಜಂಕ್ಷನ್ ಬಳಿ ರಸ್ತೆಯ ಬದಿ ನಿಲ್ಲಿಸಿದ್ದ ಕಾರನ್ನು ಅದರ ಚಾಲಕ ಯಾವುದೇ ಸೂಚನೆಯನ್ನು ನೀಡದೆ ಬಲಗಡೆಗೆ ಅತಿ ವೇಗದಿಂದ ಚಲಾಯಿಸಿದಾಗ ಪಳ್ಳಿಯಿಂದ ಮೂಡುಬೆಳ್ಳೆ ಕಡೆಗೆ ಹೋಗುತ್ತಿದ್ದ ನಾಗೇಶ್ ಆಚಾರ್ಯರವರ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ನಾಗೇಶ್ ಆಚಾರ್ಯರವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡು, ಮೋಟಾರ್ ಸೈಕಲ್ ಜಖಂಗೊಂಡಿರುತ್ತದೆ. ಕಾರು ಚಾಲಕನು ಕಾರನ್ನು ನಿಲ್ಲಿಸದೆ ಗಾಯಾಳುವನ್ನು ಚಿಕಿತ್ಸೆಗೆ ಕರೆದೊಯ್ಯದೆ, ಪೊಲೀಸರಿಗೂ ಮಾಹಿತಿ ನೀಡದೇ ಸ್ಥಳದಿಂದ ಪರಾರಿಯಾಗಿರುತ್ತಾನೆ.

ಚಿಕಿತ್ಸೆಗಾಗಿ ನಾಗೇಶ್ ಆಚಾರ್ಯರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ಟೆಂಪೋ ಚಾಲಕನಿಗೆ ಹಲ್ಲೆ- ಜೀವ ಬೆದರಿಕೆ

Madhyama Bimba

ನಕ್ರೆ ಪರಪು ಮನೆಯಲ್ಲಿ ಕಳ್ಳತನ

Madhyama Bimba

ಮುದ್ರಾಡಿಯಲ್ಲಿ ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿ. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More