ಮೂಡುಬಿದಿರೆ

ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪುಷ್ಪರಾಜ್ ಬಿ. ಅಧಿಕಾರ ಸ್ವೀಕಾರ

ಮೂಡುಬಿದಿರೆ ಕಲ್ಲಬೆಟ್ಟು: ಇಲ್ಲಿನ ಪ್ರತಿಷ್ಠಿತ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರಸಿದ್ಧ ಶಿಕ್ಷಣ ತಜ್ಞ ಹಾಗೂ ಆಡಳಿತಗಾರರಾದ ಪುಷ್ಪರಾಜ್ ಬಿ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಅವರು ಇದೇ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ (ಅಕಾಡೆಮಿಕ್ ಡೈರೆಕ್ಟರ್) ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಬರೋಬ್ಬರಿ ೩೦ ವರ್ಷಗಳ ಸುದೀರ್ಘ ಬೋಧನಾ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ಪುಷ್ಪರಾಜ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಪರಿಚಿತ ಹಾಗೂ ಗೌರವಾನ್ವಿತ ಹೆಸರಾಗಿದ್ದಾರೆ. ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಆಪ್ತ ಸಮಾಲೋಚಕರು ತರಬೇತುದಾರರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ.

ತಮ್ಮ ಸುದೀರ್ಘ ವೃತ್ತಿ ಜೀವನದಲ್ಲಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ವಿಧಾನಗಳ ಕುರಿತು ತರಬೇತಿ ನೀಡಿದ್ದಾರೆ. ಇದರೊಂದಿಗೆ, ರಾಜ್ಯದಾದ್ಯಂತ ವಿವಿಧ ಕಾಲೇಜುಗಳ 20000 ಕ್ಕೂ ಹೆಚ್ಚು ಶಿಕ್ಷಕರಿಗೆ ‘ತರಗತಿ ನಿರ್ವಹಣೆ’ ಕುರಿತುವಿಶೇಷ ಕಾರ್ಯಾಗಾರ ಹಾಗೂ ತರಬೇತಿಯನ್ನು ನೀಡಿದ್ದಾರೆ.

ದಕ್ಷ ಆಡಳಿತಗಾರರಾಗಿರುವ ಪುಷ್ಪರಾಜ್ ಬಿ. ಅವರು ಇದೀಗ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಈ ಶುಭಸಂದರ್ಭದಲ್ಲಿ, ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಅವರು ನೂತನಪ್ರಾಂಶುಪಾಲರನ್ನು ಅಭಿನಂದಿಸಿ, ಇವರ ಸಮರ್ಥ ನಾಯಕತ್ವದಲ್ಲಿ ಕಾಲೇಜು ಶೈಕ್ಷಣಿಕವಾಗಿ ಮತ್ತಷ್ಟು ಉನ್ನತ ಯಶಸ್ಸನ್ನು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಸಂಪತ್ ಕುಮಾರ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ನೂತನ ಪ್ರಾಂಶುಪಾಲರನ್ನು ಗೌರವಿಸಿ, ಶುಭ ಹಾರೈಸಿದರು.

Related posts

ದಕ್ಷಿಣ ಕನ್ನಡ 55ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Madhyama Bimba

ಸಹಿಷ್ಣುತೆ, ಸಹಾನುಭೂತಿ ಎಲ್ಲಾ ಧರ್ಮಗಳ ಆಧಾರ: ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪ೦ಡಿತಾಚಾರ್ಯವರ್ಯ -ಎಕ್ಸಲೆ೦ಟ್ ಮೂಡುಬಿದಿರೆಯಲ್ಲಿ ಸರ್ವಧರ್ಮ ಅರಿವು ಕಾರ್ಯಕ್ರಮ

Madhyama Bimba

  ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ರಿಗೆ ಭಾರತ್ ರತ್ನ ಡಾ ಎ ಪಿ ಜೆ ಅಬ್ದುಲ್ ಕಲಾಂ ಎಜುಕೇಶನ್ ಎಕ್ಷಲೆನ್ಸ್ ಅವಾರ್ಡ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More