ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟಣೆಗೆ ನ್ಯಾಯಾಲಯ ಅನುಮತಿ ನೀಡಿದೆ.
ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ ನೀಡಿದ ಆದೇಶದಂತೆ, ಜೂನ್ 3ರಂದು ಬೆಳಗ್ಗೆ 11.30ಕ್ಕೆ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ 2025ರ ಜುಲೈ 10ರಂದು ಚುನಾವಣೆ ನಡೆದಿತ್ತು. ಆದರೆ ಸಂಘದ ಉಪನಿಯಮಾವಳಿ ಹಾಗೂ ಮತದಾನದ ಪ್ರಕ್ರಿಯೆಗೆ ಸಂಬಂಧಿಸಿ
ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖ ಲಾಗಿದ್ದ ಹಿನ್ನೆಲೆಯಲ್ಲಿ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆಗೆ ತಡೆ ವಿಧಿಸಲಾಗಿತ್ತು. ಆಡಳಿತಾಧಿಕಾರಿಗಳ ಅವಧಿಯಲ್ಲೇ ಚುನಾವಣೆ ನಡೆದಿದ್ದರೂ, ಕಾನೂನು ಹೋರಾಟದ ಕಾರಣದಿಂದ ಫಲಿತಾಂಶವನ್ನು ಕಾಯ್ದಿರಿಸಲಾಗಿತ್ತು.
‘ಈ ನಡುವೆ ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯದಲ್ಲಿ ದಾಖಲಾಗಿದ್ದ ದಾವೆ ಪ್ರಕರಣದ ವಿಚಾರಣೆ ಪೂರ್ಣಗೊಂಡು, ಮೇ 25 ಕ್ಕೆ ಆದೇಶ ದೊರೆತಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳು ಅಂದು ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ತಿಳಿಸಲಾಗಿದೆ.
