ಮೂಡುಬಿದಿರೆ

ಯುವವಾಹಿನಿ ಮೂಡುಬಿದಿರೆ ನೇತೃತ್ವದಲ್ಲಿ ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿ

ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ನೆಟ್ವರ್ಕ್ ಇವರ ಪ್ರಾಯೋಜಕತ್ವದಲ್ಲಿ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಸಹಯೋಗದೊಂದಿಗೆ ಆಯೋಜಿಸಲಾದ 15 ದಿನಗಳ ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವು ಮೇ 28ರಂದು ವಿಚೀಸ್ ಕೌಶಲ್ಯ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಅವರು, ಇಂದಿನ ಕಾಲಘಟ್ಟದಲ್ಲಿ ಮಹಿಳೆಯರು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಡಬೇಕಾಗಿದೆ. ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು, ಮನೆಯಲ್ಲಿಯೇ ಉದ್ಯೋಗ ಆರಂಭಿಸಿ ಉತ್ತಮ ಆದಾಯ ಗಳಿಸಲು ಸಾಧ್ಯವಿದೆ ಎಂದು ಹೇಳಿದರು.

ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ಅವರು ಮಾತನಾಡಿ, ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರ ಆಸಕ್ತಿ ಹಾಗೂ ಸೃಜನಾತ್ಮಕತೆಯನ್ನು ಮೆಚ್ಚಿದರು. ಮಹಿಳೆಯರ ಸ್ವ ಉದ್ಯೋಗ ಹಾಗೂ ಆತ್ಮವಿಶ್ವಾಸ ವೃದ್ಧಿಗೆ ಯುವವಾಹಿನಿ ಮುಂದಿನ ದಿನಗಳಲ್ಲಿಯೂ ವಿವಿಧ ಕೌಶಲ್ಯ ತರಬೇತಿಗಳನ್ನು ಆಯೋಜಿಸಲಿದೆ ಎಂದು ತಿಳಿಸಿದರು.

ವಿಚೀಸ್ ಕೌಶಲ್ಯ ಕೇಂದ್ರದ ನಿರ್ದೇಶಕಿ ಶುಭಲಕ್ಷ್ಮಿ ಕುಂದರ್ ಅವರು ತರಬೇತಿಯ ನಂತರ ಲಭ್ಯವಿರುವ ಉದ್ಯೋಗ ಹಾಗೂ ಸ್ವ ಉದ್ಯೋಗದ ಅವಕಾಶಗಳ ಕುರಿತು ಮಾಹಿತಿ ನೀಡಿದರು. ತರಬೇತಿಯ ಶಿಕ್ಷಕಿಯಾದ ಅನಿತಾ ಅವರು 15 ದಿನಗಳ ತರಬೇತಿಯ ಅನುಭವ ಹಂಚಿಕೊಂಡು, ಮಹಿಳೆಯರ ಕಲಿಕೆಯ ಆಸಕ್ತಿ ಶ್ಲಾಘನೀಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರು ತಮ್ಮ ಅನುಭವ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡರು. ಒಟ್ಟು 27 ಮಹಿಳೆಯರು ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಪ್ರಮಾಣ ಪತ್ರ ಸ್ವೀಕರಿಸಿದರು.

ಜೆನಿಫರ್ ಕಾರ್ಯಕ್ರಮ ನಿರೂಪಿಸಿದರು. ಪವಿತ್ರ ಸರಸ್ವತಿ ಪ್ರಾರ್ಥನೆ ನೆರವೇರಿಸಿದರು. ಪ್ರಮೀಳಾ ವಂದಿಸಿದರು.

Related posts

  ಉಷಾ ರಾವ್ ನೆನಪು ಮಾತ್ರ

Madhyama Bimba

ಮೂಡುಬಿದಿರೆ ಕಂದಾಯ ನಿರೀಕ್ಷಕರಾಗಿ ರವಿಪ್ರಸಾದ್ ಎಸ್.ಮಲ್ಯ

Madhyama Bimba

ರೈತರಿಗೆ ಅನ್ಯಾಯ ಮಾಡಿದರೆ ಸ್ಟೆರ್ ಲೈಟ್ ಆಂದ್ರಕ್ಕೆ ವಾಪಾಸ್ : ಮಿಥುನ್ ರೈ ಎಚ್ಚರಿಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More