ಸರಣಿ ಅಫಘಾತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಮೂಡುಬಿದಿರೆ ತಾಲೂಕು ಪಡುಮಾರ್ನಾಡು ಬನ್ನಡ್ಕ ರಾಷ್ಟ್ರೀಯ ಹೆದ್ದಾರಿ ಪ್ರದೇಶಕ್ಕೆ ಮೂಡುಬಿದಿರೆ ಶಾಸಕ ಉಮಾನಾಥ ಏ ಕೋಟ್ಯಾನ್ ಮತ್ತೆ ಭೇಟಿ ನೀಡಿದರು.
ಅಫಘಾತ ಕುರಿತಂತೆ ಊರವರು ಕೆರಳಿ ಪ್ರತಿಭಟಿಸುವ ಸೂಚನೆ ನೀಡಿದಾಗ ಅವರು ಸ್ಥಳ ಪರಿಶೀಲನೆ ನಡೆಸಿ ಊರವರ ಬೇಡಿಕೆಯಂತೆ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಗುತ್ತಿಗೆ ವಹಿಸಿಕೊಂಡಿರುವ ಡಿ ಬಿ ಎಲ್ ಸಂಸ್ಥೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಬೇಕಾದ ಕ್ರಮ ಕೈಗೊಂಡಿದ್ದಾರೆ. ರಸ್ತೆ ಬದಿಗಳಲ್ಲಿರುವ ಜಾಗವನ್ನು ವಶಕ್ಕೆ ಪಡೆದುಕೊಂಡು ರಸ್ತೆ ನಿರ್ಮಾಣಕ್ಕೆ ಬೇಕಾದಂತೆ ಜಾಗ ಸಮತಟ್ಟುಗೊಳಿಸುವ ಕಾರ್ಯ ನಡೆಸಿದ್ದಾರೆ.
ಈ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಡುಮಾರ್ನಾಡು ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ, ಬಿಜೆಪಿ ಪ್ರಮುಖರಾದ ಸೂರಜ್ ಜೈನ್, ಗೋಪಾಲ್ ಶೆಟ್ಟಿಗಾರ್, ಬೋಳ ವಿಶ್ವನಾಥ್ ಕಾಮತ್ ಮತ್ತಿತರರು ಭಾಗವಹಿಸಿದ್ದರು.
ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಊರವರು ಮೇ 30ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.
