Blog

ನೂತನ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಂತ್ರಿಮಂಡಲಕ್ಕೆ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ*

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ. ಕೆ ಶಿವಕುಮಾರ್ ಹಾಗೂ ಮಂತ್ರಿ ಮಂಡಲ ಸಚಿವರಿಗೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ್ ಶೆಟ್ಟಿ ಮುನಿಯಾಲ್ ಅವರು ಅಭಿನಂದನೆ ಸಲ್ಲಿಸಿದರು.

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಚಿಂತನೆಯುಳ್ಳ ದೂರದರ್ಶಿ ನಾಯಕ ಎಂದು ಉದಯ್ ಶೆಟ್ಟಿ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ, ಯುವ ಸಮೂಹ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮ ಪ್ರತಿಭೆ ಹಾಗೂ ನಾಯಕತ್ವ ಬೆಳೆಸಿಕೊಳ್ಳಲು ಭಾರತ್ ಜೋಡೋ ಯುವಕ ಸಂಘ ಸ್ಥಾಪನೆ ಸೇರಿದಂತೆ ಜನಪರ ಕಾಳಜಿಯುಳ್ಳ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತ ಅರ್ಹ  ಎಂದು ಅವರು ಹೇಳಿದ್ದಾರೆ.

Related posts

ಇನ್ನೋವಾ ಅಪಘಾತ

Madhyama Bimba

ಈದುವಿನಲ್ಲಿ ಧರ್ಮಸ್ಥಳ ಸಂಘದ ಸಂಭ್ರಮ ಆಚರಣೆ

Madhyama Bimba

ನಾಲ್ಕೂರು ಕಜ್ಕೆ ದೇವಸ್ಥಾನಕ್ಕೆ ಸ್ವಾಮೀಜಿ ಪುರ ಪ್ರವೇಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More