ಮೂಡುಬಿದಿರೆ

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ

ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯ ಇರುವುದಾಗಿ ಪ್ರವರ್ತಕ ಡಾ. ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎದೆನೋವು, ಉಸಿರಾಟದ ತೊಂದರೆ, ಅತಿಯಾದ ದಣಿವು, ಹೃದಯ ಬಡಿತದ ಅಸಮಾನತೆ ಮುಂತಾದ ಲಕ್ಷಣಗಳನ್ನು ಹೊಂದಿರುವವರು ತಕ್ಷಣ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ತಜ್ಞ ವೈದ್ಯರ ಸಲಹೆಯ ಮೇರೆಗೆ ಅಗತ್ಯವಿರುವ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಸೌಲಭ್ಯ, ಶಾಶ್ವತ ಪೇಸ್ಮೆಂಟ್, ಹೃದಯರಂದ್ರ ಚಿಕಿತ್ಸೆ ಅನುಭವಸಂಪನ್ನ ಹೃದಯ ತಜ್ಞರು ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆಗಳೊಂದಿಗೆ ನೀಡಲಾಗುತ್ತದೆ. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರು ಈ ಸೌಲಭ್ಯದ ಪ್ರಯೋಜನ ಪಡೆಯಬಹುದು.

ಆಯುಷ್ಮಾನ್ ಕಾರ್ಡ್ ಹೊಂದಿರುವ ಅರ್ಹ ರೋಗಿಗಳು ಅಗತ್ಯ ದಾಖಲೆಗಳೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಸೌಲಭ್ಯ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880807509 ಯನ್ನು ಸಂಪರ್ಕಿಸಲು ಕೋರಲಾಗಿದೆ.

ಕಾರ್ಡಿಯಾಲಜಿಸ್ಟ್ ಮುಖ್ಯ ವೈದ್ಯ ಡಾ. ದಿತೇಶ್, ಫಿಸಿಸಿಯನ್ ಡಾ. ಹರೀಶ್ ನಾಯಕ್, ಡಾ. ಶಮಂತ್ ಶೆಟ್ಟಿ, ಡಾ. ವಿನಯಚಂದ್ರ ಪತ್ರಿಕಾಗೋಷ್ಠಿಯಲ್ಲಿದ್ದರು.

Related posts

ಜಿನದತ್ತ ಹೆಗ್ಡೆ ಇನ್ನಿಲ್ಲ

Madhyama Bimba

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಿಂದ ನಡ್ಯೋಡಿ ದೈವಸ್ಥಾನದಲ್ಲಿ ಸಸ್ಯ ಶ್ಯಾಮಲಾ ಕಾರ್ಯ, ಸಸಿ ವಿತರಣೆ

Madhyama Bimba

ಎಂಸಿಎಸ್ ಸೊಸೈಟಿ ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ.ರಿಗೆ ಸಮಾಜ ಮಂದಿರ ಪುರಸ್ಕಾರ ಪ್ರದಾನ- ಪಿ.ಎಲ್. ಧರ್ಮ, ಸಂದೇಶ್ ಪಿ.ಜಿ.ಯವರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More