Blog

ಕಟ್ಟಡದ ಕೆಲಸ ಮಾಡುತ್ತಿದ್ದ ಬಾಲಕ ಕೆಳಗೆ ಬಿದ್ದು ಸಾವು


ಮೂಡುಬಿದಿರೆಯಲ್ಲಿ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಶೀಟು ಹಾಕುವ ಕೆಲಸ ಮಾಡುತ್ತಿದ್ದ ಬಾಲಕ ಕೆಳಕ್ಕೆ ಬಿದ್ದು ದಾರುಣ ಅಂತ್ಯ ಕಂಡಿದ್ದಾನೆ.

ಮೂಡುಬಿದಿರೆ ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಅವರ ಪುತ್ರ ಶೌರ್ಯ ಎಸ್.ಆಚಾರ್ಯ ( 17)
ಕಡಪಳ್ಳ ಗಾಂಧಿನಗರದಲ್ಲಿರುವ ರಾಯಲ್ ಪ್ಯಾರಡೈಸ್ ಎಂಬ ಕಟ್ಟಡದಲ್ಲಿ ನಾಲ್ಕನೇ ಮಹಡಿಯ ಮೇಲೆ ಶೀಟ್ ಹಾಕುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಕಟ್ಟಡದಿಂದ ಕೆಳಕ್ಕೆ ಬಿದ್ದ ಶೌರ್ಯನನ್ನು ಸ್ಥಳೀಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕಟ್ಟಡದ ಗುತ್ತಿಗೆದಾರ ಪ್ರವೀಣ್ ಹಾಗೂ ಮಾಲಕರಾದ ನೋರ್ಟ್ ಶಾಬಾ ರೇಗೋ ಅವರು ಕೆಲಸ ಮಾಡುವಾಗ ಸರಿಯಾದ ಸುರಕ್ಷತಾ ಸಾಮಾಗ್ರಿಗಳನ್ನು ನೀಡದಿರುವುದೇ ಈ ದುರಂತಕ್ಕೆ ಕಾರಣವೆನ್ನಲಾಗಿದೆ.ಈ ಬಗ್ಗೆ ಮೂಡುಬಿದಿರೆ ಪೊಲೀಸರು ಕೇಸು  ದಾಖಲಿಸಿಕೊಂಡಿದ್ದಾರೆ.

Related posts

ನಿಂಜೂರು ಸದಾಶಿವ ಆಚಾರ್ಯ ನಿಧನ

Madhyama Bimba

ಶ್ರೀ ಕ್ಷೇತ್ರ ನೆಲ್ಲಿಯ ಜಾತ್ರಾ ಮಹೋತ್ಸವ

Madhyama Bimba

ವಿದ್ಯಾರ್ಥಿಗಳ ಮೇಲೆ ಬಲ ಪ್ರಯೋಗ ಖಂಡನೀಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More