ಕಾರ್ಕಳಹೆಬ್ರಿ

ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆ : ಅರ್ಜಿ ಆಹ್ವಾನ 

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಅಥವಾ ಖಾಯಂ ಶಿಕ್ಷಕರು / ಉಪನ್ಯಾಸಕರು ವರ್ಗಾವಣೆ / ನಿಯೋಜನೆ ಆದೇಶದ ಮೇರೆಗೆ ಹಾಜರಾಗುವವರೆಗೂ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬ್ರಹ್ಮಾವರದ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗಣಿತ ಶಿಕ್ಷಕರ ಹುದ್ದೆ, ಬೈಂದೂರಿನ ಹೆರಂಜಾಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ, ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಕಾರ್ಕಳದ ಅಜೆಕಾರು ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ, ಪಟ್ಲ ಹಿರೇಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಗಣಿತ, ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಶಂಕರನಾರಾಯಣ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಶಿಕ್ಷಕರ ಹುದ್ದೆ, ಸಿದ್ಧಾಪುರ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಖಾಲಿ ಇರುವ ಹಿಂದಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಯಡಾಡಿ-ಮತ್ಯಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ ಮತ್ತು ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ, ಆಯಾ ವಿಷಯದಲ್ಲಿ ಬಿ.ಎಸ್ಸಿ, ಬಿ.ಎಡ್, ಬಿ.ಎ ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಜೂನ್ 6 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಗಳ ಪ್ರಾಂಶುಪಾಲರುಗಳಾದ ಆರೂರು ಮೊ.ನಂ:8277894199, ಹೆರಂಜಾಲು ಮೊ.ನಂ: 9480461537, ವಡ್ಡರ್ಸೆ ಮೊ.ನಂ: 8867415291, ಅಜೆಕಾರು ಮೊ.ನಂ: 9743335673, ಹಿರೇಬೆಟ್ಟು ಪಟ್ಲ ಮೊ.ನಂ: 8970298710, ಶಂಕರನಾರಾಯಣ ಮೊ.ನಂ:6363120177, ಕಳತ್ತೂರು ಮೊ.ನಂ: 9535225409, ಸಿದ್ಧಾಪುರ ಮೊ.ನಂ: 9482487266, ಯಡಾಡಿ-ಮತ್ಯಾಡಿ ಮೊ.ನಂ:   9901519126 ಹಾಗೂ ಮಿಯ್ಯಾರು ಮೊ.ನಂ: 9739790298 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

 

 

Related posts

ಕಣಂಜಾರು ಭಾಗದಲ್ಲಿ ಸ್ಥಗಿತಗೊಂಡಿದ್ದ ಸರಕಾರಿ ಬಸ್ ಮತ್ತೆ ಪುನರಾರಂಭ – ಅಧ್ಯಕ್ಷ ಸಚ್ಚಿದಾನಂದ ಪ್ರಭುರವರ ಶ್ರಮಕ್ಕೆ ಸಿಕ್ಕ ಫಲ

Madhyama Bimba

ಕಾರ್ಕಳ: ವಿಷ ಸೇವನೆ- ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Madhyama Bimba

ಕಾರ್ಕಳ ಎಂಪಿಎಂ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More