ಕಾರ್ಕಳಹೆಬ್ರಿ

ವಸತಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಜೀವಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಹಾಗೂ ಗಣಕ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯಾ ವಿಷಯದಲ್ಲಿ ಎಂ.ಎಸ್ಸಿ, ಬಿ.ಎಡ್, ಎಂ.ಎ, ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಬೋಧನಾ ಕೌಶಲ್ಯ ಹಾಗೂ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಮೊ.ನಂ: 9964153802 ಹಾಗೂ ಆರೂರು ಮೊ.ನಂ: 8277894199 ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಅಕ್ರಮ ಮಾದಕ ವಸ್ತು ಮಾರಾಟ ಪ್ರಕರಣ- ಬಂಗ್ಲೆಗುಡ್ಡೆ ನಿವಾಸಿ ಫೈಸಲ್ ಪೊಲೀಸ್ ವಶಕ್ಕೆ

Madhyama Bimba

ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರದಿಂದ ಮೊದಲ ಹಂತದ ಅನುದಾನ ಬಿಡುಗಡೆ: ಕೃತಜ್ಞತೆ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ

Madhyama Bimba

ವರಂಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More