ಕಾರ್ಕಳಹೆಬ್ರಿ

ಹೆಬ್ರಿ: ವಿಶ್ವ ಪರಿಸರ ದಿನಾಚರಣೆ

ಹೆಬ್ರಿ ಪಂಚಾಯತ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಂಚಾಯತ್ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಗೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ, ಹೆಬ್ರಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ದಿನೇಶ್ ಎ ಡಿ ಯವರು ಚಾಲನೆ ನೀಡಿ ವಿಶ್ವ ಪರಿಸರ ದಿನಾಚರಣೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆಗೆ ನಾವು ಕೈಕೊಳ್ಳಬಹುದಾದ ಮುನ್ನೆಚ್ಚರಿಕೆಗಳ ಬಗ್ಗೆ, ಪ್ಲಾಸ್ಟಿಕ್ ಮಿತ ಬಳಕೆಯ ಬಗ್ಗೆ ತಿಳಿಸಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೆಗಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಲೆಕ್ಕ ಸಹಾಯಕಿ ಪ್ರತಿಭಾ, ಪೆರ್ಣಂಕಿಲ ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಸ್ವ ಸಹಾಯ ಒಕ್ಕೂಟದ ಎಂ ಬಿ ಕೆ, ಸಿ ಆರ್ ಪಿ ಯವರು ಸಾರ್ವಜನಿಕರು ಈ ಸಂದರ್ಭದಲ್ಲಿದ್ದರು.

ಪಂಚಾಯತ್ ಸಿಬ್ಬಂದಿ ಪ್ರಸಾದ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.

Related posts

ಮುಂಡ್ಕೂರು ’ಕೆಸರ್‌ಡ್ ಗೊಬ್ಬುಲು ಕಾರ್ಯಕ್ರಮ

Madhyama Bimba

ಶಿವಪುರ-1 ಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿಗಳ ಉದ್ಘಾಟನೆ ಹಾಗೂ ವಿವಿಧ ಕೊಡುಗೆಗಳ ವಿತರಣೆ

Madhyama Bimba

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಸುರಕ್ಷತಾ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More