ಮೂಡುಬಿದಿರೆ

ಮೂಡುಬಿದಿರೆಯಲ್ಲಿ ನಾಳೆ(ಆದಿತ್ಯವಾರ) ‘ ಗೃಹಲಕ್ಷ್ಮಿ ಕೋಟಿ ಸಂಭ್ರಮ’

ಮೂಡುಬಿದಿರೆ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಜೂನ್ 07ರಂದು ‘ ಗೃಹಲಕ್ಷ್ಮಿ ಕೋಟಿ ಸಂಭ್ರಮ’ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ(ಆಯುರ್ವೇದ) ನಡೆಯಲಿದೆ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.

ಸಮಾರಂಭ ಬೆಳಿಗ್ಗೆ 9ಗಂಟೆಗೆ ನಡೆಯಲಿದ್ದು ಸಮಾರಂಭದಲ್ಲಿ ಭಾಗವಹಿಸುವ ಮಹಿಳೆಯರಿಗೆ ಉಚಿತ ಲಕ್ಕಿಡಿಪ್ ಕೂಪನ್ ನೀಡಲಾಗುತ್ತದೆ. ಇದರಲ್ಲಿ ವಿಜೇತರಾದ 10 ಮಂದಿಗೆ ಸೀರೆಯ ಬಹುಮಾನ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ್ ಆಳ್ವ ಉದ್ಘಾಟನೆ ನೆರವೇರಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಕೆ.ಅಭಯಚಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಖಜಾಂಚಿ ಪದ್ಮರಾಜ್ ಪೂಜಾರಿ, ದಕ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸುಚರಿತ ಶೆಟ್ಟಿ, ದಕ ಕೆಡಿಪಿ ಸದ್ಯ ಪ್ರವೀಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Related posts

ಕೌಶಲ ಜ್ಞಾನವಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ -ಸವಿತಾ

Madhyama Bimba

ಡಾ. ಎಂ. ವೀರಪ್ಪ ಮೊಯಿಲಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ

Madhyama Bimba

ಸೆ. 06ರಂದು ಮೂಡುಬಿದಿರೆಯಲ್ಲಿ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆ ಶುಭಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More