ಕಾರ್ಕಳಹೆಬ್ರಿ

ಕ್ರೈಸ್ಟ್‌ಕಿಂಗ್: ವಿಶ್ವ ಪರಿಸರ ದಿನಾಚರಣೆ

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಸ್ಥೆಯ ಫಾ.ಎಫ್.ಪಿ.ಎಸ್. ಮೋನಿಸ್ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಐ.ಕ್ರಿಸ್ಟೋಫರ್ ಕೋಟ್ಯಾನ್‌ರವರು ಅವರು ಮಾತನಾಡಿ “ಈ ದಿನವು ಪ್ರಕೃತಿಯ ಹುಟ್ಟು ಹಬ್ಬವಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ತಾಯಿಯ ಹೆಸರಿನಲ್ಲಿ ಒಂದು ಗಿಡವನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸೋಣ” ಎಂದು ಹೇಳಿದರು.

ಸಂಸ್ಥೆಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ದೀಪ್ತಿ ಹಾಗೂ ಏಳನೇ ತರಗತಿಯ ವಿದ್ಯಾರ್ಥಿಯಾದ ಆಶ್ನನ್ ಡಿಸೋಜಾ ಪರಿಸರ ದಿನಾಚರಣೆಯ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಸಂಸ್ಥೆಯ ಪ್ರಾಥಮಿಕ ವಿಭಾಗದ ಉಪಪ್ರಚಾರ್ಯರಾದ ಸಿ|ಜಾಲಿ ಜೇಕಬ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಏಳನೇ ತರಗತಿಯ ವಿದ್ಯಾರ್ಥಿನಿ ನಿಯೋನಾ ಮೆಂಡೋನ್ಸಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ (ಲಿ.) ಮಂಗಳೂರು: ಕುಂಟಾಡಿಯಲ್ಲಿ ವೈದ್ಯಕೀಯ ಶಿಬಿರ

Madhyama Bimba

ದಿ. ಸಂತೋಷ್ ನಾಯ್ಕ್‌ರಿಗೆ ನುಡಿನಮನ ಕಾರ್ಯಕ್ರಮ

Madhyama Bimba

ಕಾರ್ಕಳ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More