Blog

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ


ಕಾರ್ಕಳ: ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಜೋಡುರಸ್ತೆ ಇಲ್ಲಿನ ಮಕ್ಕಳಿಗೆ ಶಾಲಾ ಬ್ಯಾಗ್‌ಗಳನ್ನು ಶಾಲಾ ಪ್ರಾರಂಭೋತ್ಸವದಂದು ವಿತರಿಸಲಾಯಿತು.
ನಿವೃತ್ತ ಲೆಕ್ಕ ಪರಿಶೋಧಕರಾದ ಕೆ ಕಮಲಾಕ್ಷ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸಹಕಾರಿ ಸಂಘದ ಉಪಾಧ್ಯಕ್ಷರಾದ ವೃಷಭರಾಜ್ ಕಡಂಬ, ಶಾಲಾ ಸಂಚಾಲಕರಾದ ರಾಧಾಕೃಷ್ಣ ಶೆಟ್ಟಿ, ಶಾಲಾ ನಿವೃತ್ತ ಮುಖ್ಯೋಪದ್ಯಾಯರಾದ ಜಗದೀಶ್ ಹೆಗ್ಡೆ, ಹಳೆ ವಿದ್ಯಾರ್ಥಿಗಳಾದ ಎಡ್ವಿನ್ ಡಿಸೋಜಾ, ನಂದಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಾನಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಹ ಶಿಕ್ಷಕರಾದ ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಿದ್ಯಾ ವಂದಿಸಿದರು

Related posts

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ಸದಸ್ಯರಿಗೆ 9.5% ಲಾಭಾಂಶ ವಿತರಣೆ

Madhyama Bimba

ಹಿರ್ಗಾನದ ಆರತಿಯವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Madhyama Bimba

ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರ ಕಾರ್ಯಕ್ರಮ -ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಯವರಿಗೆ ದೂರು ಸಲ್ಲಿಸಿದ ಕಾಂಗ್ರೆಸ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More