Blog

ಬಸ್ರಿ ಶಾಲೆ ಬೈಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ

ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.


ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ, ಕೋಶಾಧಿಕಾರಿಯಾಗಿ ಉಪನ್ಯಾಸಕರಾದ ರಾಮದಾಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಮತಿ ಪೂರ್ಣಿಮಾ ಶೆಟ್ಟಿ ಆಯ್ಕೆಯಾಗಿದ್ದಾರೆ.


ಶಾಲಾ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಶಾಲಾ ಹಳೆ ವಿದ್ಯಾರ್ಥಿಗಳ ಸಭೆಯನ್ನು ಜೂ. 7ರಂದು ಶಾಲೆಯಲ್ಲಿ ಕರೆಯಲಾಗಿದ್ದು ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ವಸಂತಿ ಎಚ್. ಜಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಕುಲಾಲ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಾರ್ಕಳ ತಹಸೀಲ್ದಾರ್ ವರ್ಗಾವಣೆ

Madhyama Bimba

ಶನಿವಾರ ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿಬಳಗದಿಂದ ಶಿವದೂತ ಗುಳಿಗೆ

Madhyama Bimba

ಅಕ್ಟೋಬರ್ 11 ರಂದು ಇಂದು 5 ನೇ ಮುದ್ರಾಡಿ ಶಾರದೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More