Blogಮೂಡುಬಿದಿರೆ

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

ಮೂಡುಬಿದಿರೆ : ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನವಿದ್ಯಾರ್ಥಿಗಳು ಗಮನಾರ್ಹ ಸಾಧನೆ ದಾಖಲಿಸಿದ್ದು ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್, ಬಿಎಸ್ಸಿ ಕೃಷಿ, ನರ್ಸಿಂಗ್ ಪ್ರವೇಶಕ್ಕೆ ನೂರರ ಒಳಗಿನ ರಾಂಕ್‌ಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಕಾಲೇಜಿನ ತನ್ಮಯಿ ಕೋಟಿ, (18 ನೇ) ತನುಶ್ರೀ ಎಚ್ ಆರ್ (23 ನೇ) ಧ್ರುವಂತ್ ಕೆ. (41ನೇ), ನಿಖಿಲ್ ಎಸ್. ಎಸ್. (41 ನೇ) ನಿಶ್ಚಲ್ (58 ನೇ) ರ್‍ಯಾಂಕ್ ಪಡೆದು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಇದರೊಂದಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ರ್‍ಯಾಂಕ್ ಗಳಿಸಿ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪುಷ್ಪರಾಜ್, ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ದೇಶಕ ಡಾ.ಪ್ರಶಾಂತ್ ಹೆಗಡೆ, ಸಿಇಟಿ ಸಮನ್ವಯಕಾರ ರಂಜಿತ್ ಜೈನ್ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

ನಿರಂತರ ಶೈಕ್ಷಣಿಕ ಮಾರ್ಗದರ್ಶನ, ಪರೀಕ್ಷಾಪೂರ್ವ ತರಬೇತಿ, ವಿಶೇಷ ಅಭ್ಯಾಸ ತರಗತಿಗಳು, ಈ ಯಶಸ್ಸಿಗೆ ಕಾರಣವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

Related posts

 ನಾಗರಾಜ್ ಭಟ್ ಇನ್ನಿಲ್ಲ

Madhyama Bimba

ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲೆಯಲ್ಲಿ  GIGGLE & GROW’ ಮಕ್ಕಳ ಆಟದ ಮನೆಯ ಉದ್ಘಾಟನೆ

Madhyama Bimba

ಎಸ್. ಎನ್. ಎಮ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ರಿತಿಕ್ ಪೂಜಾರಿ ರಾಷ್ಟ್ರಮಟ್ಟಕ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More