ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ 7,8 ಹಾಗೂ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ.
ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲೆಗಳನ್ನು ಅಥವಾ ಮೊ.ನಂ:8277894199 ಹಾಗೂ 8970298710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
