ಕಾರ್ಕಳ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ

ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ಜೂ. 08 ರಂದು ಜರಗಿತು.

ಕಾರ್ಯಕ್ರಮವು ಬೆಳಿಗ್ಗೆ ಗಣಪತಿ ಪೂಜೆಯೊಂದಿಗೆ ಆರಂಭವಾಯಿತು. ಅರ್ಚಕರಾದ ದಿನೇಶ್ ಭಟ್ ಇವರ ಮಾರ್ಗದರ್ಶನದಲ್ಲಿ ಗಣಹೋಮವನ್ನು ನೆರವೇರಿಸಲಾಯಿತು.

ಹೋಮದಲ್ಲಿ ಶಾಲಾ ಅಧ್ಯಕ್ಷರಾದ ಡಾ.ಪ್ರಶಾಂತ್ ಹೆಗ್ಡೆ, ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್ .ಕಾಮತ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಪದ್ಮನಾಭ ಮರಾಠೆ, ಕೀರ್ತನ್ ಶೆಣೈ, ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದರು.

ನಂತರ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು. ಎಲ್. ಕೆ.ಜಿ ಮಕ್ಕಳಿಗೆ ಅಕ್ಕಿಯಲ್ಲಿ ಹಾಗೂ “ಓಂ” ಬರೆಯಿಸುವ ಮೂಲಕ ವಿದ್ಯಾರಂಭ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ತಿಳಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರು ಮಕ್ಕಳಿಗೆ ಶುಭ ಹಾರೈಕೆಗಳನ್ನು ಸಲ್ಲಿಸಿ, ಉತ್ತಮ ವಿದ್ಯಾಭ್ಯಾಸದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸುವಂತೆ ಪ್ರೇರೇಪಿಸಿದರು.

Related posts

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್‌ನ ರಾಜ್ಯ ಉಪಾಧ್ಯಕ್ಷರಾಗಿ ಬೈಲೂರು ಕನಿಷ್ಕ್ ಹೆಗ್ಡೆ

Madhyama Bimba

ಕಾರ್ಕಳ: ಮಟ್ಕಾ ಜುಗಾರಿ ಆಟ- ಈರ್ವರ ಬಂಧನ

Madhyama Bimba

ಕಾರ್ಕಳ: ಕಾರಿಗೆ ಟೂರಿಸ್ಟ್ ಟ್ಯಾಕ್ಸಿ ಡಿಕ್ಕಿ- ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More