ಕಾರ್ಕಳ

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಜೂ. 11ರಂದು ಶಾಲಾ ಸಂಸತ್‌ಚುನಾವಣೆ ಕಾರ್ಯವು ಯಶಸ್ವಿಯಾಗಿ ನಡೆಯಿತು.

ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತಎಣಿಕೆಯ ನಂತರ ವಿಜೇತರನ್ನು ಘೋಷಿಸಲಾಯಿತು. ಶಾಲಾ ನಾಯಕನಾಗಿ ಪ್ರದ್ಯೋತ್ ಪ್ರಮಲ್ ಹಾಗೂ ಉಪನಾಯಕಿಯಾಗಿ ಸಿನಿ ಶೆಟ್ಟಿಯವರು ಆಯ್ಕೆಯಾಗಿರುತ್ತಾರೆ. ಈ ಚುನಾವಣೆಯ ಮೂಲಕ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಜವಾಬ್ದಾರಿಯ ಅರಿವು ಮೂಡಿಸಲಾಯಿತು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು, ಇಂಜಿನಿಯರ್ ಪ್ರಶಾಂತ್ ಶೆಟ್ಟಿ, ಉಪ ಪ್ರಾಂಶುಪಾಲೆಯಾದ ಶ್ರೀಮತಿ ವಾಣಿ.ಕೆ ಹಾಗೂ ಶಿಕ್ಷಕರು ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಕರೆ ನೀಡಿದರು.

Related posts

ಕುಕ್ಕುಂದೂರು ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಹಾಗೂ ವನಮಹೋತ್ಸವ

Madhyama Bimba

ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಕ್ಲಬ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Madhyama Bimba

ಗಣಿತ ನಗರ :-ಕಾರ್ಕಳ ಜ್ಞಾನಸುಧಾ ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More