ಬಡಗಮಿಜಾರು ಗ್ರಾಮದ ಅಶ್ವತಪುರ ಶ್ರೀ ವಾಣಿವಿಲಾಸ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವನಮಹೋತ್ಸವವನ್ನು ಆಚರಿಸಲಾಯಿತು.
ಸಭಾ ಕಾರ್ಯಕ್ರಮದಲ್ಲಿ ವಾಣಿವಿಲಾಸ ಶಿಕ್ಷಣ ಪ್ರತಿಷ್ಠಾನದ ಸದಸ್ಯರಾದ ಸುಬ್ರಮಣ್ಯ ಭಟ್ ಇವರು ಅಧ್ಯಕ್ಷತೆಯನ್ನು ವಹಿಸಿ ಪರಿಸರ ವನ್ನು ನಾವು ಯಾವ ರೀತಿ ಸಂರಕ್ಷಣೆ ಮಾಡಬೇಕು ಹಾಗೂ ಪರಿಸರ ಸಂರಕ್ಷಣೆಯ ಕರ್ತವ್ಯವನ್ನು ಪೋಷಕರು ಹಾಗೂ ವಿದ್ಯಾರ್ಥಿಗಳು ನಡೆಸಬೇಕಾದ ಜವಾಬ್ದಾರಿಯನ್ನು ಸಭೆಯಲ್ಲಿ ತಿಳಿಸಿದರು.
ಮುಖ್ಯ ಅತಿಥಿಯಾದ ಸಾಮಾಜಿಕ ಅರಣ್ಯ ವಲಯ ಅಧಿಕಾರಿಗಳಾದ ಆನಂದ್ ಮಾತನಾಡಿ ಪರಿಸರವನ್ನು ಮನುಷ್ಯನು ಯಾವ ರೀತಿ ಸಂರಕ್ಷಣೆ ಮಾಡಬೇಕು ಎಂಬ ಮಾಹಿತಿ ನೀಡಿದರು.
ಬೀಟ್ ಅರಣ್ಯ ಅಧಿಕಾರಿಯಾದ ಚಂದ್ರಶೇಖರ್ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ಮಕ್ಕಳ ಜವಾಬ್ದಾರಿ ಹಾಗೂ ವನಮಹೋತ್ಸವವನ್ನು ಆಚರಿಸಿ ಗಿಡಗಳನ್ನು ರಕ್ಷಿಸುವ ಜವಾಬ್ದಾರಿಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಸಾಮಾಜಿಕ ಕಾರ್ಯಕರ್ತ ವಿನೇಶ್ ಪೂಜಾರಿ ನಿದ್ದೋಡಿ ಇವರು ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಗೌಡ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಕೃಷ್ಣ ಇವರು ಸಭೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ವಾಣಿವಿಲಾಸ ಶಿಕ್ಷಣ ಪ್ರತಿಷ್ಠಾನದ ಸದಸ್ಯರಾದ ಸುನಿಲ್ ಕುಮಾರ್ ಸಂತೆಕಟ್ಟೆ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ವಿಟಿ ಗೀತಾ ಹಾಗೂ ಶಿಕ್ಷಕ ಬೃಂದದವರು ಸಭೆಯಲ್ಲಿ ಹಾಜರಿದ್ದು ಶಾಲಾ ಹಳೆ ವಿದ್ಯಾರ್ಥಿ ರಾಕೇಶ್ ಇವರು ಕಾರ್ಯಕ್ರಮ ನಿರೂಪಿಸಿದರು.
ನಂತರ ಶಾಲಾ ಮಕ್ಕಳು ಹಾಗೂ ಪೋಷಕರು ಸದಸ್ಯರೆಲ್ಲ ಸೇರಿ ಶಾಲಾ ಆಟದ ಮೈದಾನದ ಬದಿಯಲ್ಲಿ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು.
