ಕಾರ್ಕಳ

ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಗೀತ ತರಗತಿ ಪ್ರಾರಂಭ

ಕಾರ್ಕಳದ ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ರ ಸಾಲಿನಿಂದ ಹೊಸದಾಗಿ ಸಂಗೀತ ತರಗತಿಯನ್ನು ಪ್ರಾರಂಭಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಪಿ.ಶೆಣೈಯವರು ತರಗತಿಯ ಉದ್ಘಾಟನೆ ನೆರವೇರಿಸಿದರು.

ಸಂಗೀತ ಶಿಕ್ಷಕಿ ಶ್ರೀಮತಿ ಟಿ ಸಾಣೂರು ಮಾತನಾಡುತ್ತಾ, ಸಂಗೀತದಿಂದ ಮನೋರಂಜನೆಯ ಜೊತೆಗೆ ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರವೂ ಸಿಗುತ್ತದೆ. ಹಾಗೆಯೇ ಈ ತರಗತಿಯಲ್ಲಿ ಶಾಸ್ತ್ರೀಯ ಸಂಗೀತದ ವಿವಿಧ ಪ್ರಕಾರಗಳಾದ ಕರ್ನಾಟಕ ಹಾಗೂ ಹಿಂದೂಸ್ತಾನಿ, ಜೊತೆಗೆ ಸುಗಮ ಸಂಗೀತ, ಭಾವಗೀತೆ, ಭಕ್ತಿಗೀತೆಗಳನ್ನೂ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು ಎಂದು ತಿಳಿಸಿದರು.

ಮುಖ್ಯೋಪಾಧ್ಯಾಯಿನಿ ಹಾಗೂ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಾರ್ಕಳ: ಕಾರುಗಳ ನಡುವೆ ಅಪಘಾತ

Madhyama Bimba

ಬೈಲೂರು: ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ

Madhyama Bimba

ಕಾರ್ಕಳ: ಟೆಂಪೋ ಚಾಲಕನಿಗೆ ಹಲ್ಲೆ- ಜೀವ ಬೆದರಿಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More