ಕಾರ್ಕಳ: ಕಾರ್ಕಳ ಪುಲ್ಕೇರಿ ಬಳಿ ಮೋಟಾರ್ ಸೈಕಲ್‌ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಜೂ. 14ರಂದು ವರದಿಯಾಗಿದೆ.
ಮೋಟಾರ್ ಸೈಕಲ್ ಸವಾರ ಚೇತನ್ (30)ತನ್ನ ಮೋಟಾರ್ ಸೈಕಲ್‌ನಲ್ಲಿ ಸ್ನೇಹಿತ ಸಂಪತ್‌ನೊಂದಿಗೆ ಮೂಡಬಿದ್ರೆಯಿಂದ ಕಾರ್ಕಳದ ಕಡೆಗೆ ಬರುತ್ತಿರುವಾಗ ಜೋಡುರಸ್ತೆಯಿಂದ ಪುಲ್ಕೇರಿ ಕಡೆಗೆ ಚಾಲಕ ಕಾರ್ತಿಕ್ ಬಳೆಗಾರ ಚಲಾಯಿಸಿಕೊಂಡು ಹೋಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿಯಾಗಿದೆ.
ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಸಂಪತ್‌ನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ಚೇತನ್‌ರವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
