ಕಾರ್ಕಳ

ಬೈಲೂರು ಮೈನ್ ಶಾಲೆಯಲ್ಲಿ ಉಚಿತ ಸ್ಕೂಲ್ ಬ್ಯಾಗ್ ವಿತರಣೆ

ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮವು ಜೂ. 15ರಂದು ಜರುಗಿತು.


ಶಾಲೆಯ ಹಿರಿಯ ವಿದ್ಯಾರ್ಥಿಯಾದ ಪ್ರಸಾದ್ ಶೆಟ್ಟಿ ಅಚ್ಚೋಟು ಅವರು ತಮ್ಮ ಸ್ವಂತ ಖರ್ಚಿನಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತವಾಗಿ ಸ್ಕೂಲ್ ಬ್ಯಾಗ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದಾನಿ ಪ್ರಸಾದ್ ಶೆಟ್ಟಿ ಅವರ ಮಾತೃಶ್ರೀಯಾದ ಶ್ರೀಮತಿ ರಮಣಿ ಶೆಟ್ಟಿ, ಸಹೋದರಿ ಶ್ರೀಮತಿ ಜಯಲಕ್ಷ್ಮಿ ಶೆಟ್ಟಿ, ಭಾವ ಸುರೇಶ್ ಶೆಟ್ಟಿ ಹಾಗೂ ಶ್ರೀಮತಿ ಉಷಾ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಾಸುದೇವ ಶೆಟ್ಟಿಗಾರ್, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪ ಹಾಗೂ ವಿದ್ಯಾರ್ಥಿ ನಾಯಕಿ ಕುಮಾರಿ ಅಶ್ವಿತ ಉಪಸ್ಥಿತರಿದ್ದರು.

ಹಿರಿಯ ಶಿಕ್ಷಕಿಯಾದ ಶ್ರೀಮತಿ ಸುಮಾ ದೇವಿ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಆಶಾ ಭಾನು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿಯಾದ ಶ್ರೀಮತಿ ಅಶ್ವಿನಿ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದರು.

Related posts

ಕಾರ್ಕಳ: ಅನಾರೋಗ್ಯದಿಂದ ಮೃತ್ಯು

Madhyama Bimba

ಕಾರ್ಕಳ: ಶ್ರೀ ಲಕ್ಷ್ಮೀ ಜ್ಯುವೆಲ್ಲರ್‍ಸ್ ದೀಪಾವಳಿ ಕೊಡುಗೆ- ಪ್ರತಿ ಗ್ರಾಂ ಚಿನ್ನಕ್ಕೆ 400 ರೂ. ರಿಯಾಯಿತಿ

Madhyama Bimba

ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More